ಬೆಂಗಳೂರು: 76ನೇ ಗಣರಾಜ್ಯೋತ್ಸವದ ಅಂಗವಾಗಿ 215 ಅಡಿ ಬಾನೆತ್ತರದ ಧ್ವಜ ಸ್ಥಂಭದಲ್ಲಿ 40*60 ಅಡಿಯ ರಾಷ್ಟ್ರಧ್ವಜಾರೋಹಣವನ್ನು ಮುಖ್ಯ ಅತಿಥಿಗಳಾದ ರಾಜ್ಯಸಭೆಯ ಮಾಜಿ ಸದಸ್ಯರು ಡಾ. ಎಲ್ ಹನುಮಂತಯ್ಯ ಅವರು ನೆರವೇರಿಸಿ, ಸಂವಿಧಾನ ಪೀಠಿಕೆಯನ್ನು ಭೋದಿಸಿದರು.
ಇಂದು ಬೆಳಗ್ಗೆ 8.30ಕ್ಕೆ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ನೇರವೇರಿತು. ಮಾಜಿ ಸಚಿವರು ಹಾಗೂ ವಿಜಯನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎಂ ಕೃಷ್ಣಪ್ಪರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀಯುತ ಪ್ರಿಯಕೃಷ್ಣರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನಪ್ರಿಯ ಯುವ ಮುಖಂಡರಾದ ಶ್ರೀ ಪ್ರದೀಪ್ ಕೃಷ್ಣಪ್ಪರವರು ಆಗಮಿಸಿದರು.
ವಿಜಯನಗರ ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಲಾ ಮಕ್ಕಳಿಂದ ಪಥ ಸಂಚಲನ ಹಾಗೂ ಧ್ವಜ ವಂದನೆ ನೆರವೇರಿತು. ಇಂದು ಸಂಜೆ 6ಕ್ಕೆ ಸ್ವರ ಸಂಭ್ರಮ ಕಾರ್ಯಕ್ರಮ ಇರಲಿದ್ದು, ಖ್ಯಾತ ಹಿನ್ನೆಲೆ ಗಾಯಕಿರಾದ ಶ್ರೀಮತಿ ಸಂಗೀತಾ ಕಟ್ಟಿ ಹಾಗೂ ಜೋಗಿ ಸುನಿತಾ ತಂಡದವರಿಂದ ಕಾರ್ಯಕ್ರಮ ಇರಲಿದ್ದು, ಸರ್ವರಿಗೂ ಉಚಿತ್ರ ಪ್ರವೇಶ ಇರಲಿದೆ.
ಸಚಿವರೇ ಒಂದು ವರ್ಷದಿಂದ ವಿದ್ಯುತ್ ಬಿಲ್ ಕಟ್ಟಿಲ್ಲ : 8.17 ಲಕ್ಷ ಬಿಲ್ ಬಾಕಿ ಉಳಿಸಿಕೊಂಡ ಮಂಕಾಳ ವೈದ್ಯ


