BBMP
Loading ...

Shivanna

ಬೆಂಗಳೂರು: ಅನಾರೋಗ್ಯದ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿ ಇಂದು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಇಂದು ಶಿವಣ್ಣ ತಾಯ್ನಾಡಿಗೆ ಬಂದಿಳಿದಿದ್ದಾರೆ. ಮೂತ್ರಕೋಶದ ಕ್ಯಾನ್ಸರ್ ಸಂಬಂಧ ಆಪರೇಷನ್ ಮಾಡಿಸಿಕೊಳ್ಳಲು ನಟ ಶಿವರಾಜಕುಮಾರ್ ಡಿ.18 ರಂದು ಅಮೆರಿಕಕ್ಕೆ ತೆರಳಿದ್ದರು. ಬಳಿಕ ಡಿ.34 ರಂದು ಆಪರೇಷನ್‌ಗೆ ಒಳಗಾಗಿದ್ದು, ಇತ್ತೀಚಿಗಷ್ಟೇ ಶಿವಣ್ಣ ತಾಯ್ನಾಡಿಗೆ ಬರುವ ಸಿಹಿ ಸುದ್ದಿಯನ್ನು ಸ್ವತಃ ವಿಡಿಯೋ ಮೂಲಕ ಹಂಚಿಕೊಂಡಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿ ತಾಯ್ನಾಡಿಗೆ ಮರಳಿದ್ದಾರೆ.

ಅಮೆರಿಕದಿಂದ ದುಬೈಗೆ ಬಂದಿಳಿದು, ಅಲ್ಲಿಂದ ಕನೆಕ್ಟೆಡ್ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಿಗ್ಗೆ 9ರ ಆಸುಪಾಸಿನಲ್ಲಿ ಬೆಂಗಳೂರಿನ ಏರ್ಪೋಟ್‌ನಲ್ಲಿ ಲ್ಯಾಂಡ್ ಆಗಿದ್ದಾರೆ. ಅವರಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ಸಚಿವರೇ ಒಂದು ವರ್ಷದಿಂದ ವಿದ್ಯುತ್ ಬಿಲ್ ಕಟ್ಟಿಲ್ಲ : 8.17 ಲಕ್ಷ ಬಿಲ್ ಬಾಕಿ ಉಳಿಸಿಕೊಂಡ ಮಂಕಾಳ ವೈದ್ಯ

Leave a Reply

Your email address will not be published. Required fields are marked *