ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್ಗೆ ದುಪ್ಪಟ್ಟು ದರ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ಅದನ್ನು ಕಡಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮೆಟ್ರೋ ಟಿಕೆಟ್ ದರ ಇಳಿಕೆ ಮಾಡುವಂತೆ ಬಿಎಂಆರ್ಸಿಎಲ್ (BMRCL) ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಸಿಎಂ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಟ್ವೀಟ್ನಲ್ಲಿ ಏನಿದೆ?
ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.
The way Bangalore Metro Rail Corporation Limited (BMRCL) has implemented the Bengaluru Metro fare revision has led to anomalies, with fares more than doubling in certain sections.
I have asked the MD of BMRCL to urgently address these issues and reduce fares where increases are…
— Siddaramaiah (@siddaramaiah) February 13, 2025
ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ.
ಮಹಿಳಾ ಎಸಿಪಿ ಜೊತೆ ಅಕ್ರಮ ಸಂಬಂಧ ಆರೋಪ : ಎಸಿಪಿ ಗೋವರ್ಧನ್ ವಿರುದ್ಧ ಪತ್ನಿ ದೂರು


