BBMP
Loading ...

Siddaramaiah-fb-1024x576

ಬೆಂಗಳೂರು: ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು (ಮಂಗಳವಾರ) ವಿಧಾನಸೌಧದಲ್ಲಿ ಬಿ ಖಾತಾ ಅಭಿಯಾನಕ್ಕೆ ಸೂಚನೆ ನೀಡಿರುವ ಬಗ್ಗೆ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು ಹಾಗೂ ಆಸ್ತಿಗಳಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರದಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾ ಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಕೆ.ಎನ್.ರಾಜಣ್ಣರವರ ನಡುವೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವ ಬಗ್ಗೆ ನಡೆಯುತ್ತಿರುವ ವಾದದ ಕುರಿತು ಪ್ರತಿಕ್ರಿಯೆ ನೀಡಿ, ರಾಜಣ್ಣ ಹಾಗೂ ಡಿಸಿಎಂ ರವರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ಪಕ್ಷದ ಹೈಕಮಾಂಡ್ ನ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ದಲಿತ ಮುಖಂಡರೊದಂದಿಗಿನ ಬಜೆಟ್ ಪೂರ್ವ ಸಭೆಯ ಬಗ್ಗೆ ಉತ್ತರಿಸಿ, ಇಂದು ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಅವರ ಸಲಹೆ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು. ವಿಧಾನಪರಿಷತ್ತಿನ ಸದಸ್ಯರ ನಾಮನಿರ್ದೇಶನ ಕುರಿತು ಚರ್ಚೆಯನ್ನು ತನ್ನ ಅನಾರೋಗ್ಯದ ನಿಮಿತ್ತ ನಡೆಸಲು ಸಾಧ್ಯವಾಗಿಲ್ಲವೆಂದು, ಮುಂದೆ ಈ ಕುರಿತು ನವದೆಹಲಿಗೆ ಹೋಗುವ ಸಾಧ್ಯತೆಯಿದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ. ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಾವು, ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವರಾಜ್ಯಗಳಲ್ಲೂ ಜಾರಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ. ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ, ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು. ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ: ಸ್ಪಷ್ಟನೆ ನೀಡಿದ ಸಚಿವ ಕೆಜೆ ಜಾರ್ಜ್

Leave a Reply

Your email address will not be published. Required fields are marked *