BBMP
Loading ...

BBMP Single House

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂಟಿ ಮನೆ ನಿರ್ಮಾಣಕ್ಕಾಗಿ 25ನೇ ಫೆಬ್ರವರಿ 2025ರ ಒಳಗಾಗಿ ಅರ್ಜಿ ಸಲ್ಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಾಗರಿಕರಲ್ಲಿ ಮನವಿ ಮಾಡಿದರು. ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ’ದಲ್ಲಿ ಸಾರ್ವಜನಿಕರಿಂದ ಬಂದ ದೂರುಗಳಿಗೆ ಸ್ಪಂದಿಸುವ ವೇಳೆ, 30ಕ್ಕೂ ಹೆಚ್ಚು ನಾಗರಿಕರು ಒಂಟಿ ಮನೆ ಯೋಜನೆಯಲ್ಲಿ ಅನುದಾನ ಒದಗಿಸಲು ಮನವಿ ಮಾಡಿದರು.

ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಯಿಸಿ, 2022 ರಿಂದ 24 ರವರೆಗೆ ಒಂಟಿ ಮನೆಗಾಗಿ ಬಂದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಶೀಘ್ರ ಅನುದಾನ ಒದಗಿಸಲಾಗುವುದೆಂದು ತಿಳಿಸಿದರು. ಒಂಟಿ ಮನೆ ನಿರ್ಮಾಣಕ್ಕಾಗಿ ಇದುವರೆಗೆ ಅರ್ಜಿ ಸಲ್ಲಿಸದೇ ಇರುವವರು ಕೂಡಲೆ ಪಾಲಿಕೆ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಪಡೆದು 25ನೇ ಫೆಬ್ರವರಿ 2025ರ ಒಳಗಾಗಿ ಆಯಾ ವಲಯದ ಕಲ್ಯಾಣ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದೆಂದು ತಿಳಿಸಿದರು.

ಸಸಿಗಳಿಗೆ ಸಂಸ್ಕರಣ ನೀರು ಉಪಯೋಗಿಸಲು ಸೂಚನೆ:
ಬೇಸಿಗೆ ಕಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಿಯಾವಾಕಿ ಅರಣ್ಯದಲ್ಲಿ ನೆಟ್ಟಿರುವ ಸಸಿಗಳಿಗೆ ಜಲಮಂಡಳಿಯ ಸಂಸ್ಕರಣಾ ನೀರನ್ನು ಟ್ಯಾಂಕರ್ ಗಳ ಮೂಲಕ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಯಿತು. ಜೊತೆಗೆ ರಾಯಲ್ ರೆಸಿಡೆನ್ಸಿ ಪಾರ್ಕ್ ಗೆ ತ್ವರಿತವಾಗಿ ಫೆನ್ಸಿಂಗ್ ಮಾಡಲು ಸೂಚಿಸಲಾಯಿತು.

ಒಳಚರಂಡಿ ದುರಸ್ತಿ ಜವಾಬ್ದಾರಿ ಜಳಮಂಡಳಿಯದ್ದು:
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಸಿಎಂಸಿ, ಟಿಎಂಸಿ ವ್ಯಾಪ್ತಿಯಲ್ಲಿರುವ ಒಳಚಂಡಿಗಳ ದುರಸ್ತಿ ಕಾಮಗಾರಿಯನ್ನು ಜಲಂಡಳಿಯಿಂದ ಮಾಡಬೇಕಿದೆ. ಈ ಸಂಬಂಧ ಇನ್ನು ಮುಂದೆ ಪಾಲಿಕೆಯಿಂದ ಯಾವುದೇ ಒಳಚರಂಡಿ ದುರಸ್ತಿ ಕಾರ್ಯವನ್ನು ನಡೆಸಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ : ಮೇ 10ರ ವರೆಗೆ ಇ-ಖಾತಾ ಅಭಿಯಾನ, ಖಾತಾ ಪಡೆಯಲು ಇಲ್ಲಿದೆ ಸರಳ ವಿಧಾನ!

Leave a Reply

Your email address will not be published. Required fields are marked *