BBMP
Loading ...

IMG_20250222_080258

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಫೆಬ್ರವರಿ 27ರಿಂದ ಸಬ್ ರಿಜಿಸ್ಟ್ರಾರ್ ಗಳು ಮುಷ್ಕರ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಫೆಬ್ರವರಿ 27ರಿಂದ ರಾಜ್ಯಾಧ್ಯಂತ ಆಸ್ತಿ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ ಎಂಬುದಾಗಿ ಹೇಳಲಾಗುತ್ತಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೌಕರರ ಸಂಘವು ಶುಕ್ರವಾರದಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಸಲ್ಲಿಸಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೇ ಫೆಬ್ರವರಿ 27ರಿದಂ ಮುಷ್ಕರ ನಡೆಸುವುದಾಗಿ ಪತ್ರದಲ್ಲಿ ತಿಳಿಸಿದೆ.

ಅಂದಹಾಗೇ ಕಾವೇರಿ-2 ತಂತ್ರಾಂಶದಲ್ಲಿನ ಸಮಸ್ಯೆ, ಇಸಿ, ಸರ್ವಸ್ ಸಮಸ್ಯೆ, ಐಟಿ ಅಧಿಕಾರಿಗಳ ಮಾಹಿತಿ ಹೆಸರಿನಲ್ಲಿ ಉಪ ನೋಂದಣಾಧಿಕಾರಿಗಳಿಗೆ ನೀಡುತ್ತಿರುವ ಕಿರುಕುಳ ಹಾಗೂ ಸಬ್ ರಿಜಿಸ್ಟ್ರಾರ್ ಗಳ ವರ್ಗಾವಣೆಗೆ ಪ್ರತ್ಯೇಕ ನಿಯಮಗಳ್ನು ರೂಪಿಸಲುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಫೆಬ್ರವರಿ.27ರಿಂದ ನೋಂದಣಿ ಪ್ರತ್ರಿಯೆ ಸ್ಥಗಿತಗೊಳ್ಳೋ ಸಾಧ್ಯತೆ ಇದೆ.

Leave a Reply

Your email address will not be published. Required fields are marked *