ಬೆಂಗಳೂರು: ನಗರದ ವಿವಿಧೆಡೆ ಭಾನುವಾರ (ಫೆ 23) ಪವರ್ ಕಟ್ ಇರಲಿದೆ. ಬೆಸ್ಕಾಂ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ತುರ್ತು ನಿರ್ವಹಣಾ ಕಾರ್ಯಗಳನ್ನು ಕೆಪಿಟಿಸಿಎಲ್ ಕೈಗೆತ್ತಿಕೊಳ್ಳುತ್ತಿದ್ದು, ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ ಹೇಳಿದೆ.
ವಿಜಯನಗರ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಫೆ.23ರಂದು ಬೆಳಗ್ಗೆ 10ರಿಂದ 5ರವರೆಗೆ ವಿಜಯನಗರ ಸೇರಿದಂತೆ ಸುತ್ತಮುತ್ತಲಿನ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಅಧೀಕ್ಷಕ ಎಂಜಿನಿಯರ್ ಬಿ.ನಾರಾಯಣಸ್ವಾಮಿ ತಿಳಿಸಿದ್ದಾರೆ.
ಬಸವೇಶ್ವರ ನಗರ, ವಿಜಯನಗರ, ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ, ಆರ್ಪಿಸಿ ಲೇಔಟ್, ಮಾರೇನಹಳ್ಳಿ, ಬಿನ್ನಿ ಲೇಔಟ್, ಪ್ರಶಾಂತ ‘ನಗರ, ಎಂ.ಸಿ.ಲೇಔಟ್, ಹೊಸಹಳ್ಳಿ, ತಿಮ್ಮೇನಹಳ್ಳಿ, ವಿನಾಯಕ ಲೇಔಟ್, ಕಾವೇರಿಪುರ, ರಂಗನಾಥಪುರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ನಾಗರಬಾವಿ, ಸಿದ್ದಯ್ಯ ಪುರಾಣಿಕ್ ರೋಡ್, ಕೆಎಚ್ ಬಿ ಕಾಲೋನಿ, ಮಾಗಡಿ ಮುಖ್ಯ ರಸ್ತೆ, ಎಚ್ವಿಆರ್ ಲೇಔಟ್, ಅಗ್ರಹಾರ ದಾಸರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ನಾಳೆ ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಆಗಲಿದೆ.
ಪ್ರಯಾಣ ದರ ಏರಿಕೆ ಎಫೆಕ್ಟ್: ನಮ್ಮ ಮೆಟ್ರೋದಿಂದ ದೂರ ಉಳಿದ 6 ಲಕ್ಷ ಪ್ರಯಾಣಿಕರು, ಭಾರೀ ನಷ್ಟ


