ಬೆಂಗಳೂರು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ SMK ತಂಡ ಗೆಲುವು ಸಾಧಿಸಿತು.
ದಿನಾಂಕ 22/02/2025 ರ ಶನಿವಾರದಂದು ಚುನಾವಣೆ ನಡೆಯಿತು. SMK ತಂಡ ಅಭೂತಪೂರ್ವ ವಿಜಯ ಸಾಧಿಸಿದ್ದು, ಇದಕ್ಕೆ ಕಾರಣಿಭೂತರಾದ ಎಸ್ಎಂಕೆ ತಂಡದ ಅಭಿಮಾನಿಗಳಿಗೆ/ಕಾರ್ಯಕರ್ತರಿಗೆ ಹಾಗೂ ನಾಯಕರುಗಳಿಗೆ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ಮಾಜಿ ಉಪಾಧ್ಯಕ್ಷ ರಮೇಶ್ ಎಸ್ ಅವರು ಧನ್ಯವಾದ ಸಲ್ಲಿಸಿದ್ದಾರೆ.



