BBMP
Loading ...

IB Shivaraj

ಬೆಂಗಳೂರು: ರಾಜ್ಯ ಕಾಂಗ್ರೆಸ್​ ಇಂಟಕ್ ವಿಭಾಗದ ಕಾರ್ಯದರ್ಶಿಯನ್ನಾಗಿ ಶ್ರೀ ಐ.ಬಿ. ಶಿವರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಭಾರತ ಕಾಂಗ್ರೆಸ್ ಸಮಿತಿಯ ಇಂಟಕ್​ ವಿಭಾಗದ ಅಧ್ಯಕ್ಷರಾದ ಸನ್ಮಾನ್ಯ ಡಾ. ಜಿ. ಸಂಜೀವ್ ರೆಡ್ಡಿ ಅವರ ಆದೇಶದ ಮೇರೆಗೆ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸನ್ಮಾನ್ಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯ ಮೇರೆಗೆ ರಾಜ್ಯ ಇಂಟಕ್ ವಿಭಾಗದ ಕಾರ್ಯದರ್ಶಿಯನ್ನಾಗಿ ಶ್ರೀ ಐ.ಬಿ. ಶಿವರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಶಿವರಾಜು ಅವರು ಕೂಡಲೇ ಅಧಿಕಾರವನ್ನು ವಹಿಸಿಕೊಂಡು, ರಾಜ್ಯದಲ್ಲಿ ಇಂಟಕ್ ಪರವಾಗಿ ಸಂಘ (Union) ವನ್ನು ರಚಿಸಿ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿ, ಪಕ್ಷದ ಮುಖಂಡರ ಮಾರ್ಗದರ್ಶನ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ, ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಸೂಚಿಸಲಾಗಿದೆ.

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕನ್ನಡಪರ ಸಂಘಟನೆಗಳಿಂದ ಕರೆ!

Leave a Reply

Your email address will not be published. Required fields are marked *