ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲಂಚ ಪಡೆದಿರುವ ಆರೋಪದಲ್ಲಿ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್ ಹಾಗೂ ಕಾನ್ಸ್ಟೆàಬಲ್ವೊಬ್ಬರನ್ನು ಅಮಾನತುಗೊಳಿಸ ಲಾಗಿದೆ.
ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಠಾಣೆಯ ಪಿಎಸ್ಐ ಬಸವರಾಜ್ ಹಾಗೂ ಕಾನ್ಸ್ಟೇಬಲ್ ಲ್ಯಾಪ್ಟಾಪ್ ಹಾಗೂ 1 ಲಕ್ಷ ರೂ. ಪಡೆದುಕೊಂಡಿರುವ ಆರೋಪ ಕೇಳಿ ಬಂದಿತ್ತು.
ಈ ಬಗ್ಗೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರು ತನಿಖೆ ನಡೆಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೆ ವರದಿ ಸಲ್ಲಿಸಿದ್ದರು. ಪ್ರಕರಣವು ಸಾಬೀತಾದ ಹಿನ್ನೆಲೆಯಲ್ಲಿ ದಯಾನಂದ ಅವರು ಇಬ್ಬರನ್ನೂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.


