BBMP
Loading ...

BBMP

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಕೊಡಲು BBMP ಮುಂದಾಗಿದೆ. BBMP ವ್ಯಾಪ್ತಿಯಲ್ಲಿ ಈಗಾಗಲೇ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಗುರುತಿಸಲಾಗಿದೆ. ಈ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ವಹೀವಾಟಿಗೆ ಅನುಕೂಲ ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ಗುರುತಿನ ಚೀಟಿ ವಿತರಣೆಗೆ BBMP ಕ್ರಮ ಕೈಗೊಂಡಿದೆ.

ಸಮೀಕ್ಷೆ ಮೂಲಕ ಗುರುತಿಸಲಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ, ಕಲ್ಯಾಣ ಕಾರ್ಯಕ್ರಮಗಳು, ಬೀದಿ ಬದಿ ವ್ಯಾಪಾರಿಗಳು, ಶಾಲೆಯಿಂದ ಹೊರಗುಳಿದ ಮಕ್ಕಳ‌ ಸಮೀಕ್ಷೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೋಮವಾರ ರಂದು ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ, ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳಲ್ಲಿ ಸುಮಾರು 27 ಸಾವಿರ ಮಂದಿ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಲಾಗಿದೆ. ಎಲ್ಲರಿಗೂ ಶೀಘ್ರವಾಗಿ ಗುರುತಿನ ಚೀಟಿ ವಿತರಣೆ ಮಾಡಿ ಎಂದು ಹೇಳಿದರು.

ಬೀದಿ ಬದಿ ವ್ಯಾಪಾರಿಗಳಿಗೆ ನೀಡುವ ಗುರುತಿನ ಚೀಟಿ ಯಾವ ಮಾದರಿಯಲ್ಲಿ ಇರಬೇಕೆಂದು ಅಂತಿಗೊಳಿಸಿ. ಗುರುತಿನ ಚೀಟಿ ನೀಡಿದ ಬಳಿಕ ಗುರುತಿಸಿರುವಂತಹ ವ್ಯಾಪಾರ ವಲಯಗಳಲ್ಲಿ, ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡಲು ಅನುವು ಮಾಡಿಕೊಬೇಕು ಎಂದು ಸೂಚಿಸಿದರು.

ಬೆಂಗಳೂರು ನಮ್ಮ ಮೆಟ್ರೋ 4 ಹೊಸ ಮಾರ್ಗಗಳು 4 ವರ್ಷದಲ್ಲಿ ಪೂರ್ಣ; 62 ಕಡೆ ನಿಲ್ದಾಣ ಆರಂಭ; ಎಲ್ಲೆಲ್ಲಿ? ಇಲ್ಲಿದೆ ಪೂರ್ಣ ಮಾಹಿತಿ

Leave a Reply

Your email address will not be published. Required fields are marked *