ಬೆಂಗಳೂರು: ಇದೇ ಭಾನುವಾರ (ಮಾರ್ಚ್ 09) ದಂದು ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ವಜ್ರ ಮಹೋತ್ಸವ ಸಮಾರಂಭ ನಡೆಯಲಿದೆ.
ಭಾನುವಾರ ಬೆಳಗ್ಗೆ 10 ಗಂಟೆಯಿಂದ ಎನ್.ಆರ್. ಕಾಲೋನಿಯ ಎ.ಪಿ.ಎಸ್ ಕಾಲೇಜು ಆಟದ ಮೈದಾನದಲ್ಲಿ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ವಜ್ರ ಮಹೋತ್ಸವ ಸಮಾರಂಭ ವಿಜೃಂಭಣೆಯಿಂದ ನೆರವೇರಲಿದೆ.
ಈ ಕಾರ್ಯಕ್ರಮವನ್ನು ಘನತವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ. ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ತ್ಯಾಗರಾಜ ವಜ್ರಶ್ರೀ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಶಾಸಕರು ಮತ್ತು ರಾಜ್ಯ ಭೂ ಅಭಿವೃದ್ಧಿ ಬ್ಯಾಂಕ್ನ ಅಧ್ಯಕ್ಷರಾದ ಕೆ. ಷಡಕ್ಷರಿ ಅವರು ಬ್ಯಾಂಕಿನ ಸಾಕ್ಷ್ಯಾಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಶಾಸಕ ವಿಜಯೇಂದ್ರ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ. ರಾಮಮೂರ್ತಿ ಅವರು ತ್ಯಾಗರಾಜ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ಅಧ್ಯಕ್ಷರಾದ ಡಾ. ಎಂ.ಆರ್. ವೆಂಕಟೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಮತ್ತು ಆರ್ಬಿಐ ಸೆಂಟ್ರಲ್ ಬೋರ್ಡ್ ಡೈರೆಕ್ಟರ್ ಆದ ಸತೀಶ್ ಮರಾಠೆ ಅವರು ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಿಕ್ಕೇರಿ ಕೃಷ್ಣಮೂರ್ತಿ ಅವರಿಂದ ಸುಗಮ ಸಂಗೀತ ಮತ್ತು ಖ್ಯಾತ ಹಾಸ್ಯ ನಟ ಮಿಮಿಕ್ರಿ ಗೋಪಿ ಅವರಿಂದ ಹಾಸ್ಯ ಮನರಂಜನೆ ಕಾರ್ಯಕ್ರಮ ಇರಲಿದೆ. ಮಧ್ಯಾಹ್ನ 1.30ಕ್ಕೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದ್ದು, ಬ್ಯಾಂಕಿನ ಖಾಯಂ ಸದಸ್ಯತ್ವದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕೆಂದು ಹೇಳಲಾಗಿದೆ.




ಹಳ್ಳಿ, ಪಟ್ಟಣಗಳಲ್ಲಿ ಸ್ಮಾರ್ಟ್ ಮೀಟರ್‌ಗೆ ಕಡ್ಡಾಯಕ್ಕೆ ಬ್ರೇಕ್, ಗ್ರಾಹಕರಿಗೆ ಬಿಗ್ ರಿಲೀಫ್!


