BBMP
Loading ...

Drugs

ಬೆಂಗಳೂರು/ಮಂಗಳೂರು:- ನಗರದಲ್ಲಿ ಬರೋಬ್ಬರಿ 75 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡುವ ಮೂಲಕ ಇತಿಹಾಸದಲ್ಲೇ ಮೊಟ್ಟ ಮೊದಲ ದೊಡ್ಡ ಕಾರ್ಯಾಚರಣೆ ಇದು ಎಂದು ಸಿಸಿಬಿ ಹೇಳಿಕೊಂಡಿದೆ.

ಅಲ್ಲದೇ ಪ್ರಕರಣ ಸಂಬಂಧ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ಎಂಡಿಎಂಎ ಡ್ರಗ್ಸ್ ದೆಹಲಿಯ ಲ್ಯಾಬ್​ನಲ್ಲಿ ನಿತ್ಯ ತಯಾರಾಗುತ್ತಿತ್ತು. ವಾರಕ್ಕೊಮ್ಮೆ ಬೆಂಗಳೂರಿಗೆ ವಿಮಾನದಲ್ಲಿ ಮೂಟೆಗಟ್ಟಲೆ ಬರುತ್ತಿತ್ತು. ವಾರಕ್ಕೆ 15-30 ಕೆಜಿ ಮತ್ತು ತಿಂಗಳಿಗೆ ಕನಿಷ್ಠ 100 ಕೆಜಿ ಎಮ್​ಡಿಎಮ್​ಎ ಡ್ರಗ್ಸ್ ಬೆಂಗಳೂರಿಗೆ ಬರುತ್ತಿದೆ. ಬೆಂಗಳೂರಿನಲ್ಲಿ ತಿಂಗಳಿಗೆ ಕನಿಷ್ಠ 50-60 ಕೋಟಿ ರೂಪಾಯಿ ಡ್ರಗ್ ವಹಿವಾಟು ನಡೆಯುತ್ತದೆ ಎಂಬ ಅಂಶ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಡ್ರಗ್ ಮಾಫಿಯಾಗೆ ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ಸಾಥ್​ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಂಗಳೂರು ಪೊಲೀಸ್ ಕಮಿಷನರ್​ ಅನುಪಮ್ ಅಗರ್ವಾಲ್​ ಮಾತನಾಡಿ, ಕರ್ನಾಟಕದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಕಾರ್ಯಾಚರಣೆ ನಡೆದಿದೆ. 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್​ ಜಪ್ತಿ ಮಾಡಿದ್ದೇವೆ. ದಕ್ಷಿಣ ಆಫ್ರಿಕಾ ದೇಶದ ಇಬ್ಬರು ಪ್ರಜೆಗಳಾದ ಬಂಬಾ ಫಂಟಾ, ಅಬಿಗೈಲ್ ಅಡೋನಿಸ್ ಎಂಬಾತನನ್ನು ಬಂಧಿಸಿದ್ದೇವೆ ಎಂದು ತಿಳಿಸಿದರು.

6 ತಿಂಗಳ ಹಿಂದೆ ಹೈದರ್ ಆಲಿ ಎಂಬಾತನನ್ನು ವಶಕ್ಕೆ ಪಡೆದಿದ್ದೇವು. ಆತನಿಂದ 15 ಗ್ರಾಂ ಎಂಡಿಎಂಎ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದೆವು. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ನೈಜೀರಿಯಾ ಪ್ರಜೆಯ ಮಾಹಿತಿ ಸಿಕ್ಕಿತ್ತು. ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ 6 ಕೋಟಿ ಮೌಲ್ಯದ ಎಂಡಿಎಂಎ ಸಮೇತ ಪೀಟರ್​ನನ್ನು ವಶಕ್ಕೆ ಪಡೆದಿದ್ದೇವು. ಈ ಪ್ರಕರಣದ ಬಳಿಕ ತನಿಖೆ ನಡೆಸಿ ಕಿಂಗ್​ಪಿನ್ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದೇವು.

ಇದರ ಮೂಲ ಪತ್ತೆಗೆ ಇಳಿಯಲು ಕಳೆದ 6 ತಿಂಗಳಿಂದ ಕಾರ್ಯಾಚರಣೆ ನಡೆಸಲಾಯ್ತು. ವಿದೇಶಿ ಪ್ರಜೆಗಳು ಡ್ರಗ್ಸ್​ ಸಾಗಿಸುವ ಮಾಹಿತಿ ಸಿಕ್ಕಿತ್ತು. ಮಾರ್ಚ್​ 14ರಂದು ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ವಿದೇಶಿ ಮಹಿಳೆಯರು ಡ್ರಗ್ಸ್​ ತರುತ್ತಿರುವ ಬಗ್ಗೆ ಮಾಹಿತಿ ದೊರೆಯಿತು ಎಂದು ಹೇಳಿದರು.

ಬಿಡದಿಯ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆ: ಕನ್ನಡಿಗರ ಬಗ್ಗೆಯೂ ಅವಾಚ್ಯ ಪದ ಬಳಕೆ

Leave a Reply

Your email address will not be published. Required fields are marked *