ಬೆಂಗಳೂರು: ನಗರದ ರಸ್ತೆಬದಿ ವ್ಯಾಪಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಒಂದು ಸಿಹಿಸುದ್ದಿ ನೀಡಿದ್ದಾರೆ.
ನಿನ್ನೆ (ಮಾರ್ಚ್ 24) ಸುದ್ದಿಗೋಷ್ಠಿ ನಡೆಸಿದ ಮಾತಾಡಿದ ಅವರು, ಇನ್ನು ಮುಂದೆ ಯಾರೂ ರಸ್ತೆ ಬದಿ ವ್ಯಾಪಾರ ಮಾಡುವಂತಿಲ್ಲ, ಅವರು ಬಿಬಿಎಂಪಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡರೆ ತಳ್ಳುವ ಗಾಡಿಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗುವುದು, ಮೋಟಾರರ ವಾಹನಗಳು ಸೇರಿದಂತೆ 4 ರಿಂದ 5 ಬಗೆಯ ವಾಹನಗಳನ್ನು ವ್ಯಾಪಾರಿಗಳಿಗೆ ನೀಡುವ ನಿರ್ಧಾರ ಮಾಡಲಾಗಿದೆ, ವ್ಯಾಪಾರಿಗಳು ತಮಗಿಷ್ಟ ಬರುವ ಗಾಡಿಯನ್ನು ಆರಿಸಿಕೊಳ್ಳಬಹುದು ಎಂದು ಹೇಳಿದರು.
ಇನ್ನು ಬೀದಿ ಬದಿ ವ್ಯಾಪಾರಿಗಳಿಗೆ ರಸ್ತೆಬದಿ ಮಳಿಗೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಅವಕಾಶವಿಲ್ಲ. ಈ ಬಗ್ಗೆ ಕೋರ್ಟ್ ನಿರ್ದೇಶನವೂ ಇದೆ. ಇಲ್ಲಿಯವರೆಗೆ ಅಂದಾಜು 3,778 ಜನ ತಳ್ಳುವ ಗಾಡಿ ನೀಡಿ ಎಂದು ಅರ್ಜಿ ಹಾಕಿದ್ದಾರೆ. ನಾವು ಈ ವರ್ಷ ಪಾಲಿಕೆಯಿಂದ ಸುಮಾರು 10,000 ತಳ್ಳುವ ಗಾಡಿಗಳನ್ನು ನೀಡಲು ತಯಾರಿದ್ದೇವೆ. ತಳ್ಳುವ ಗಾಡಿ ಬೇಕಾದವರು ನೋಂದಣಿ ಮಾಡಿಕೊಳ್ಳಬೇಕು.
ಗಾಡಿಯನ್ನು ಸುಮ್ಮನೆ ನಿಲ್ಲಿಸಿಕೊಳ್ಳುವಂತಿಲ್ಲ. ಪ್ರತಿದಿನ ಎಲ್ಲಿ, ಯಾವ ಜಾಗದಲ್ಲಿ ವಹಿವಾಟು ನಡೆಸಲಾಯಿತು ಎನ್ನುವ ಮಾಹಿತಿ ತಿಳಿದುಕೊಳ್ಳುವ ವ್ಯವಸ್ಥೆ ಜಾರಿಗೆ ತರಲಿದ್ದೇವೆ. ಗಾಡಿಯನ್ನು ಮನೆಯಲ್ಲಿ ನಿಲ್ಲಿಸಿಕೊಳ್ಳುವುದು, ಮತ್ತೊಬ್ಬರಿಗೆ ಮಾರುವುದಕ್ಕೆ ಅವಕಾಶವಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
ಸ್ಮಾರ್ಟ್ ಮೀಟರ್ ಖರೀದಿ ದರ ವೈಜ್ಞಾನಿಕ, ಇದರಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದ ಬೆಸ್ಕಾಂ ಎಂಡಿ


