ನವದೆಹಲಿ: ಕೇಂದ್ರ ಸರ್ಕಾರ ಏ.1ರೊಳಗೆ ಹೊಸ ಟೋಲ್ ಸುಂಕ ನೀತಿಯನ್ನು ಬಿಡುಗಡೆಗೊಳಿಸಲಿದ್ದು, ಇದರಿಂದ ವಾಹನ ಸವಾರರಿಗೆ ರಿಯಾಯಿತಿ ಸಿಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಸುಂಕ ಕೇಂದ್ರದಲ್ಲಿ ಪ್ರಯಾಣಿಕರಿಗೆ ಸುಲಭವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಏ.1ರ ಒಳಗೆ ಹೊಸ ಟೋಲ್ ಸುಂಕ ನೀತಿಯನ್ನು ಬಿಡುಗಡೆಗೊಳಿಸಲಿದೆ. ಹೊಸ ನೀತಿಯಲ್ಲಿ ಪ್ರಯಾಣಿಕರಿಗೆ ಸ್ವಲ್ಪ ಪ್ರಮಾಣದ ರಿಯಾಯಿತಿ ದೊರೆಯಲಿದೆ. ಜೊತೆಗೆ ಸುಂಕ ವಸೂಲಿಯನ್ನೂ ಸರಳೀಕರಿಸಲಾಗಿದ್ದು, ಇದರಿಂದ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.
2023-24ರಲ್ಲಿ 64,809.86 ಕೋಟಿ ರೂ. ಟೋಲ್ ಸಂಗ್ರಹವಾಗಿದ್ದು, ಶೇ.35ರಷ್ಟು ವೃದ್ಧಿಯಾಗಿದೆ ಎಂದು ತಿಳಿಸಿದರು.
ಈ ಸಲ ಬಿಬಿಎಂಪಿ ಬಜೆಟ್ ಗಾತ್ರ 19000 ಕೋಟಿ ರೂಪಾಯಿ: ಮಾರ್ಚ್ 28ರಂದು ಮಂಡನೆ!


