BBMP
Loading ...

ಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್ ​2ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ.

ಅಧಿಕ ತಾಪಮಾನ
ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಭಾಗಮಂಡಲದಲ್ಲಿ ಮಳೆಯಾಗಿದೆ.ಬೆಂಗಳೂರಿನ ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಸರ್ಕಾರ ಯಾವುದನ್ನೂ ಉಚಿತವಾಗಿ ನೀಡಬಾರದು, ಉಚಿತ ಎನ್ನುವುದೇ ಅಪಾಯಕಾರಿ: ಆರ್.ವಿ.ದೇಶಪಾಂಡೆ

Leave a Reply

Your email address will not be published. Required fields are marked *