BBMP
Loading ...

wmremove-transformed

ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು (ಏಪ್ರಿಲ್​ 08) ಮಧ್ಯಾಹ್ನ 12.50ಕ್ಕೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ್ದು, ಫಲಿತಾಂಶವನ್ನು ಮಂಡಳಿಯ ವೆಬ್‌ಸೈಟ್ http//karresults.nic.in ನಲ್ಲಿ ವೀಕ್ಷಿಸಬಹುದಾಗಿದೆ.

ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ. 93.90 ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ಯಾದಿಗಿರಿ ಜಿಲ್ಲೆ ಶೇ 48.45 ಫಲಿತಾಂಶದೊಂದಿಗೆ ಕೊನೆಯ ಸ್ಥಾನ ಪಡೆದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದಿನ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಕಲಾ ವಿಭಾಗದಲ್ಲಿ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಪಡೆದಿದ್ದಾರೆ. ಸಂಜನಾ 600ಕ್ಕೆ 597 ಅಂಕಗಳನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದರೆ, ಕಾಮರ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು‌ ವಿದ್ಯಾರ್ಥಿನಿ ದೀಪಶ್ರೀ ಮೊದಲ ರಾಂಕ್ ಗಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಶೇ. 73.45 ರಷ್ಟು ಫಲಿತಾಂಶ ಬಂದಿದೆ.

ಬೆಟ್ಟಿಂಗ್ ಆಪ್ ಪ್ರಮೋಟ್ ಆರೋಪ: ಸೋನು ಗೌಡ, ವರುಣ್​ ಆರಾಧ್ಯ ಸೇರಿ 100ಕ್ಕೂ ಹೆಚ್ಚು ರೀಲ್ಸ್ ಸ್ಟಾರ್‌ಗಳ ವಿಚಾರಣೆ

Leave a Reply

Your email address will not be published. Required fields are marked *