BBMP
Loading ...

KJ George

ಬೆಂಗಳೂರು:- ಇಂಧನ ಸಚಿವರಿಗೆ ಸಂಕಷ್ಟ ಎದುರಾಗಿದ್ದು, ಸ್ಮಾರ್ಟ್ ಮೀಟರ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು ನೀಡಿದೆ.

ಇಂಧನ ಸಚಿವ ಕೆ.ಜೆ.ಜಾರ್ಜ್, ಗೌರವ್ ಗುಪ್ತಾ, ಟೆಕ್ನಿಕಲ್ ಡೈರೆಕ್ಟರ್ ಮಹಾಂತೇಶ್ & ಬಾಲಾಜಿ ಮೇಲೆ ದೂರು ನೀಡಲಾಗಿದೆ. ಶಾಸಕರಾದ ಅಶ್ವಥ್ ನಾರಾಯಣ್, ಎಸ್.ಆರ್.ವಿಶ್ವನಾಥ್, ಧೀರಜ್ ಮುನಿರಾಜು ನೇತೃತ್ವದ ನಿಯೋಗದಿಂದ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ, ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರುನೀಡಿದ್ದಾರೆ.

ಲೋಕಾಯುಕ್ತಕ್ಕೆ ದೂರು ನೀಡಿದ ಬಳಿಕ ಮಾತನಾಡಿದ ಶಾಸಕ ಅಶ್ವಥ್ ನಾರಾಯಣ್, ಇಂಧನ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ನೀಡಿದ್ದೇವೆ ಎಂದರು.

ಇಂಧನ ಸಚಿವ ಕೆಜೆ ಜಾರ್ಜ್, ಗೌರವ್ ಗುಪ್ತಾ, ಟೆಕ್ನಿಕಲ್ ಡೈರೆಕ್ಟರ್ ಮಹಾಂತೇಶ್ & ಬಾಲಾಜಿ ವಿರುದ್ಧ ದೂರು ನೀಡಿದ್ದು, ರಾಜಶ್ರೀ ಕಂಪನಿಯ ಕಂಬ ತಯಾರಿಸುವ ಕಂಪನಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಟೆಂಡರ್ ನೀಡಿದ್ದಾರೆ. ನಿಯಮಗಳ ಉಲ್ಲಂಘನೆ, ಬ್ಲಾಕ್ ಲಿಸ್ಟ್ ಕಂಪನಿಗೆ ಟೆಂಡರ್ ನೀಡಿದ್ದಾರೆ ಎಂದು ಆರೋಪಿಸಿದರು.

ಬಿಬಿಎಂಪಿ ವ್ಯಾಪ್ತಿಯ ಈಜುಕೊಳಗಳಲ್ಲಿ ದರ ಏರಿಕೆ: ಬೇಕಾಬಿಟ್ಟಿ ದರ ನಿಗದಿಗೆ ಬೆಂಗಳೂರಿಗರ ಆಕ್ರೋಶ

Leave a Reply

Your email address will not be published. Required fields are marked *