BBMP
Loading ...

RCB

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಮುಖಾಮುಖಿ ಪಂದ್ಯ ನಡೆಯಲಿದೆ.

ತವರಿನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯವನ್ನಾಡದರೂ ಗೆಲ್ಲುವ ಮೂಲಕ ಆರ್​ಸಿಬಿ ಪ್ಲೇಆಫ್‌ಗೆ ಇನ್ನಷ್ಟು ಸನಿಹವಾಗಲು ಮತ್ತು ತವರಿನಲ್ಲಿ ಸೋಲಿನ ಸರಣಿಯನ್ನು ಮುಂದುವರೆಸಲು ಯತ್ನಿಸಲಿದೆ. ಏಕೆಂದರೆ ತವರಿನಲ್ಲಿ ಆಡಿರುವ 3 ಪಂದ್ಯಗಳನ್ನು ಸೋತಿರುವ ಆರ್​ಸಿಬಿಗೆ ನಾಳಿನ ಪಂದ್ಯ ಅತ್ಯಂತ ಮಹತ್ವದಾಗಿದೆ. ಇತ್ತ ರಾಜಸ್ಥಾನ್ ಕೂಡ ಕಳೆದ ಮುಖಾಮುಖಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಹಾಗೂ ಪ್ಲೇ ಆಫ್ ರೇಸ್​ನಲ್ಲಿ ಜೀವಂತವಾಗಿರಲು ಹೋರಾಡಲಿದೆ.

ಇಲ್ಲಿಯವರೆಗೆ ಎರಡೂ ತಂಡಗಳ ನಡುವೆ ನಡೆದ 32 ಪಂದ್ಯಗಳಲ್ಲಿ, ಆರ್​ಸಿಬಿ 16 ರಲ್ಲಿ ಗೆದ್ದಿದ್ದರೆ, ರಾಜಸ್ಥಾನ್ 14 ರಲ್ಲಿ ಗೆದ್ದಿದೆ. ಉಳಿದಂತೆ ಎರಡು ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ. ಆದಾಗ್ಯೂ, ಬೆಂಗಳೂರಿನಲ್ಲಿ ನಡೆದ ಪಂದ್ಯಗಳಲ್ಲಿ ರಾಜಸ್ಥಾನ್ ನಾಲ್ಕು ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ ಮೂರು ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ ಎರಡು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ. ಕಳೆದ ಬಾರಿ ಜೈಪುರದಲ್ಲಿ ಎರಡೂ ತಂಡಗಳು ಮುಖಾಮುಖಿಯಾದಾಗ ಆರ್​ಸಿಬಿ ಒಂಬತ್ತು ವಿಕೆಟ್‌ಗಳ ಜಯ ಸಾಧಿಸಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಜೋಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ದೇವದತ್ತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರಾ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.

ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ!

Leave a Reply

Your email address will not be published. Required fields are marked *