ಪ್ರವಾಸಿಗರ ಸ್ವರ್ಗ ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ 26 ಅಮಾಯಕ ಪ್ರವಾಸಿಗರ ಪ್ರಾಣ ಕಸಿದಿದ್ದು, ಈ ದುರಂತ ಇಡೀ ಭಾರತೀಯರನ್ನು ನೋವಿಗೆ ದೂಡಿದೆ. ಈ ಹಿನ್ನೆಲೆಯಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಿಯಕೃಷ್ಣ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿದೇ ಇರಲು ತೀರ್ಮಾನಿಸಿದ್ದಾರೆ.
ಏಪ್ರಿಲ್ 27ರಂದು ಪ್ರಿಯಕೃಷ್ಣ ಅವರ ಹುಟ್ಟುಹಬ್ಬವಿತ್ತು. ಆಚರಣೆ ಮಾಡಿಕೊಳ್ಳದೇ ಇರಲು ನಿರ್ಧರಿಸಿದ್ದು, ಈ ಸಂಬಂಧ ತಮ್ಮ ಅಭಿಮಾನಿಗಳಿಗೆ ಪತ್ರದ ಮೂಲಕ ಸಂದೇಶ ರವಾನಿಸಿದ್ದಾರೆ.
ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಉಗ್ರರು ಅಮಾಯಕರ ಪ್ರಾಣಹತ್ಯೆ ಮಾಡಿರುವ ಘಟನೆ ಅತ್ಯಂತ ಖಂಡನೀಯ, ನಾವೆಲ್ಲರೂ ಸಂತಾಪ ಸೂಚಿಸುವ ಈ ಸಂದರ್ಭದಲ್ಲಿ ನನ್ನ ಜನ್ಮದಿನವನ್ನು ಆಚರಿಸದಿರಲು ನಿರ್ಧರಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು, ಹಿತೈಷಿಗಳು ಹಾಗೂ ಕಾರ್ಯಕರ್ತರು ನನ್ನ ಜನ್ಮದಿನದಂದು ಹಾರೈಸಲು ಹಾಗೂ ಆಶೀರ್ವದಿಸಲು ಬಾರದಿರಲು ತಮ್ಮಲ್ಲಿ ವಿನಂತಿ ಮಾಡುತ್ತಾ, ನೀವಿದ್ದಲ್ಲೇ ನನ್ನನ್ನು ಹಾರೈಸಿ, ಶುಭಕೊರಲು ವಿನಂತಿಸಿಕೊಳ್ಳುತ್ತೇನೆ ಎಂದು ಪ್ರಿಯಕೃಷ್ಣ ಹೇಳಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ನೀಡಲು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. “ದೇಶವೇ ಮೊದಲು ಎನ್ನೋಣ ಭಾರತ ಮಾತೆಗೆ ನಮಿಸೋಣ ಎಂದಿದ್ದಾರೆ.



