BBMP
Loading ...

liquor-sale-policy

ಬೆಂಗಳೂರು:- ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಯರ್ 20ರೂ. ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಡೀಸೆಲ್, ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಮದ್ಯದ ದರ ಏರಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಬಿಯರ್ ಮೇಲಿನ ಅಬಕಾರಿ ಸುಂಕವನ್ನ 195% ನಿಂದ 205% ಹೆಚ್ಚಿಸುವ ಬಗ್ಗೆ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಇದಕ್ಕೆ ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.

ಬ್ರಾಂಡಿ, ವಿಸ್ಕಿ, ರಮ್, ಜಿನ್‍ಗಳ ದರವನ್ನ ಪ್ರತಿ ಕ್ವಾಟರ್‍ಗೆ 10 ರೂ.ನಿಂದ 15 ರೂ. ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಅಲ್ಲದೇ ಬಿಯರ್ ದರವನ್ನ 10 ರೂ. ನಿಂದ 20 ರೂ. ವರೆಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಆಲ್ಕೋಹಾಲ್ ಹೆಚ್ಚಿರುವ ಬ್ರ್ಯಾಂಡ್‍ಗಳ ಬಿಯರ್ ಬೆಲೆ ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ.

ನಾನು ಡಿ.ಕೆ ಸುರೇಶ್ ಪತ್ನಿ, ನನಗೆ ರಾಯಲ್ ಸ್ಟೇಟಸ್ ಬೇಕು: ಮಹಿಳೆ ವಿಡಿಯೋ ವೈರಲ್

Leave a Reply

Your email address will not be published. Required fields are marked *