ಮಂಗಳೂರು : ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ವಿಕೃತಿ ಮೆರೆದಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ನಡೆದಿದೆ.
ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಮಹಿಳೆಗೆ ಗುಪ್ತಾಂಗ ತೋರಿಸಿದ್ದಾನೆ. ಈ ಸಂಬಂಧ ಮಹಿಳೆ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಪಲ್ಯನನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.
ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುದ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ಧ ಕೇಳಿ ಬಂದಿದೆ. ಹೀಗಾಗಿ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದು, ಇದನ್ನು ನೋಡಿದ ಪದ್ಮನಾಭ ತನ್ನ ಚಡ್ಡಿಯನ್ನು ಕೆಳಗೆ ಜಾರಿಸಿ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಬಿಎನ್ಎಸ್ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪದ್ಮನಾಭ ಸಪಲ್ಯನನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜರೆಮಾರು ತಿಳಿಸಿದ್ದಾರೆ. ಅಲ್ಲದೆ ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುವಂತೆ ದಯಾನಂದ ಶೆಟ್ಟಿ ಸೂಚಿಸಿದ್ದಾರೆ.
IPL 2025: ಐಪಿಎಲ್ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಮೇ 17ರಿಂದ ಪುನಾರಂಭ, ಅಂತಿಮ 4 ಪಂದ್ಯ ನಡೆಯುವುದೆಲ್ಲಿ?


