ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾತ್ರಿಯಿಂದ ಬೆಳಿಗ್ಗೆ 5:30 ರವರೆಗೆ 104 ಮಿ.ಮೀ. ಮಳೆ ದಾಖಲಾಗಿದ್ದು, ಕಳೆದ 10 ವರ್ಷಗಳ ಮೇ ತಿಂಗಳಿನಲ್ಲಿ ಇದು ಅತಿ ಹೆಚ್ಚು ಮಳೆಯಾಗಿದೆ. ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿರುವ ಮನೆಗಳು ಜಲಾವೃತಗೊಂಡಿದ್ದು, ರಸ್ತೆಗಳು ಕೆರೆಯಂತಾಗಿವೆ. ಬೆಳಗಿನ ಜಾವದಿಂದ ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ತೊಂದರೆಗೀಡಾಗಿದ್ದಾರೆ.
ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ನಿಮ್ಮಲ್ಲಿ ಒಬ್ಬ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಳೆಯ ಅವಾಂತರದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಉಂಟಾದ ಹಾನಿಯಿಂದ ತೀವ್ರ ಕಳವಳಗೊಂಡಿದ್ದೇನೆ.
ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಸವಾಲುಗಳನ್ನು ಎದುರಿಸಲು ಮತ್ತು ಪರಿಹಾರವನ್ನು ಕೈಗೊಳ್ಳುವ ದಿನದ 24 ಗಂಟೆಗಳೂ ನಾನು ಕೆಲಸ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ನಾನು ಬಿಬಿಎಂಪಿ ವಾರ್ ರೂಮ್ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ವಾಸ್ತವಿಕವಾಗಿ ಮಾಹಿತಿ ಪಡೆಯುತ್ತೇನೆ. ಇವತ್ತು ನಾವು ಎದುರಿಸುತ್ತಿರುವ ಸಮಸ್ಯೆಗಳು ಹೊಸದೇನಲ್ಲ. ಹಲವು ಸರ್ಕಾರಗಳ, ಹಲವು ವರ್ಷಗಳ ನಿರ್ಲಕ್ಷತನ ಈ ಸಮಸ್ಯೆ ಎದುರಿಸುತ್ತಿದ್ದೇವೆ. ಈ ಸಮಸ್ಯೆಯನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದೇನೆ. ತಾತ್ಕಾಲಿಕ ಪರಿಹಾರ ಅಲ್ಲ, ದೀರ್ಘಕಾಲಿಕ ಪರಿಹಾರ ಕೈಗೊಳ್ಳು ಕೆಲಸ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ.
Deeply concerned by the havoc caused by relentless rains in Bengaluru.
I’ve been in continuous touch with the concerned officers and I’m closely monitoring the situation.As always, I remain committed to Bengaluru – working round the clock to address challenges and ensure…
— DK Shivakumar (@DKShivakumar) May 19, 2025
ನನ್ನೆಲ್ಲಾ ಬೆಂಗಳೂರಿಗರೇ, ನಾನು ನಿಮ್ಮಲ್ಲಿ ಒಬ್ಬ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ. ನಿಮ್ಮ ಕಳವಳ ಅರ್ಥಮಾಡಿಕೊಳ್ತೇನೆ. ಹತಾಶೆಯನ್ನು ಹಂಚಿಕೊಳ್ಳುತ್ತೇನೆ. ಬೆಂಗಳೂರಿನ ಈ ಸಮಸ್ಯೆಯನ್ನು ಪರಿಹರಿಸಲು ನಾನು ಬದ್ಧನಾಗಿದ್ದು, ಈ ಬಗ್ಗೆ ನಾನು ಭರವಸೆ ನೀಡುತ್ತೇನೆ. ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಹಾಮಳೆಗೆ ಮೊದಲ ಬಲಿ: ಚನ್ನಸಂದ್ರದಲ್ಲಿ ಗೋಡೆ ಕುಸಿದು ಮಹಿಳೆ ಸಾವು


