BBMP
Loading ...

lokayukta-bbmp

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ(BBMP)ಯ ಇಬ್ಬರು ಇಂಜಿನಿಯರ್​ಗಳು ಬುಧವಾರ ಐದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಹೆಬ್ಬಾಳ ಉಪ ವಿಭಾಗದ ಎಇಇ ಮಹದೇವ ಮತ್ತು ಆರ್​ಎಂವಿ ಉಪ ವಿಭಾಗದ ಎಇ ಸುರೇಂದ್ರ ಅವರನ್ನು ಲೋಕಾಯುಕ್ತ ಅಧಿಕಾರಿಗಳ ಬಂಧಿಸಿ, ಹಣ ಜಪ್ತಿ ಮಾಡಿದ್ದಾರೆ.


ಎನ್ಒಸಿ ನೀಡಲು ಸಂಜಯ್ ಎಂಬುವವರಿಗೆ 10 ಲಕ್ಷ ರೂಪಾಯಿ ಲಂಚ ನೀಡುವಂತೆ ಈ ಇಬ್ಬರು ಇಂಜಿನಿಯರ್​ಗಳು ಬೇಡಿಕೆ ಇಟ್ಟಿದ್ದರು. ಅದರಂತೆ ಮುಂಗಡವಾಗಿ 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ರೆಡ್​ ಹ್ಯಾಂಡ್​ ಆಗಿ ಹಿಡಿದಿದ್ದಾರೆ.


ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *