BBMP
Loading ...

KJ George

ರಾಮನಗರ: ವಿದ್ಯುತ್ ಸಂಪರ್ಕಕ್ಕೆ ಒಸಿ ಸಮಸ್ಯೆ ಕುರಿತು ಸಂಪುಟದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಇಂಧನ ಇಲಾಖೆ ಸಂಬಂಧಿಸಿ ಜನಪ್ರತಿನಿಧಿಗಳು, ಇಲಾಖೆ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ವೇಳೆ ಈ ವಿಚಾರ ಪ್ರಸ್ತಾಪಿಸಿದರು.

“ಸ್ವಾಧೀನಾನುಭವ ಪತ್ರ (ಒಸಿ) ಹೊಂದಿಲ್ಲದ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳಿಗೂ ವಿದ್ಯುತ್‌ ಸಂಪರ್ಕ ನೀಡಬಾರದು ಎಂಬ ಇಂಧನ ಇಲಾಖೆ ನಿಯಮದಿಂದ ಸಾಕಷ್ಟು ಸಮಸ್ಯೆಗಳಾಗುತ್ತಿರುವ ಬಗ್ಗೆ ಸಭೆಯಲ್ಲಿ ಶಾಸಕರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಈ ನೀತಿ ಜಾರಿಗೆ ತಂದಿದೆ. ಇದರಿಂದ ಸಮಸ್ಯೆಗಳಾಗುತ್ತಿರುವುದು ಸರ್ಕಾರದ ಗಮನದಲ್ಲಿದ್ದು, ಸಚಿವ ಸಂಪುಟ ಸಭೆಯಲ್ಲೂ ಚರ್ಚಿಸಿ ಇದಕ್ಕೆ ಪರಿಹಾರ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿಕಾರಿಗಳು ಸೂಕ್ತ ಪರಿಹಾರ ಸಿದ್ಧಪಡಿಸಿದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಜನರ ಸಮಸ್ಯೆ ಬಗೆಹರಿಸಲಾಗುವುದು”, ಎಂದು ಸಚಿವ ಕೆಜೆ ಜಾರ್ಜ್‌ ಹೇಳಿದರು.

“ಮನೆಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವ ಪಿಎಂ ಸೂರ್ಯ ಘರ್ ಯೋಜನೆಯನ್ನು ಅಳವಡಿಸಿಕೊಳ್ಳುವಂತೆ ಮಾಸಿಕ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸುವ ಗ್ರಾಹಕರನ್ನು ಒಪ್ಪಿಸುವ ಕಾರ್ಯಕ್ಕೆ ಮುಂದಾಗಬೇಕು. ಆಯಾ ವಿಭಾಗದ ಜನಪ್ರತಿನಿಧಿಗಳ ಜತೆ ಆಗಾಗ್ಗೆ ಸಮಾಲೋಚಿಸಿ ಇಂಧನ ಇಲಾಖೆಗೆ ಸಂಬಂಧಿಸಿದ ಕೆಲಸಗಳನ್ನು ನಿರ್ವಹಿಸಬೇಕು”, ಎಂದು ಸಚಿವರು ಇದೇ ವೇಳೆ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸಭೆ ಸದಸ್ಯರಾದ ಎಚ್.ಎ. ಇಕ್ಬಾಲ್ ಹುಸೇನ್, ಎಚ್.ಸಿ.ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳು ಸಭೆಯಲ್ಲಿದ್ದರು.

ಕರ್ನಾಟಕ ಕೃಷಿ ಪಂಪ್ ಸೆಟ್‌ಗಳ ಸಕ್ರಮಕ್ಕೆ ನವೀಕೃತ ಶೀಘ್ರ ಸಂಪರ್ಕ ಯೋಜನೆ; ಸಚಿವ ಕೆಜೆ ಜಾರ್ಜ್‌ ಘೋಷಣೆ

Leave a Reply

Your email address will not be published. Required fields are marked *