BBMP
Loading ...

Car Couple

ಬೆಂಗಳೂರು: ಕಾರಿನಲ್ಲಿ ಹೋಗುತ್ತಿರುವಾಗ ಸನ್‌ರೂಫ್ ತೆಗೆದು ದಂಪತಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಗರದ ಕೋರಮಂಗಲದಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ದಂಪತಿ ಊಟ ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾರಿನ ಸನ್‌ರೂಪ್ ತೆಗೆದು ರೊಮ್ಯಾನ್ಸ್ ಮಾಡಿದ್ದು, ದಂಪತಿಯ ವರ್ತನೆಯನ್ನು ವಾಹನ ಸವಾರರು ವಿಡಿಯೋ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನು ಕಂಡ ಹಲಸೂರು ಪೊಲೀಸರು ಕಾರಿನ ನಂಬರ್ ಆಧಾರಿಸಿ ಮಾಲೀಕರನ್ನು ಪತ್ತೆ ಹಚ್ಚಿದ್ದಾರೆ. ಅಪಾಯಕಾರಿಯಾಗಿ ಕಾರು ಚಲಾಯಿಸಿದ್ದಕ್ಕೆ 1,000 ರೂ. ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ 500 ರೂ. ದಂಡ ವಿಧಿಸಿದ್ದಾರೆ ಹಾಗೂ ಮುಂದೆ ಈ ರೀತಿ ವರ್ತಿಸದಂತೆ ಎಚ್ಚರಿಕೆ ನೀಡಿದ್ದಾರೆ.

ಗ್ರಾಹಕರ ಗಮನಕ್ಕೆ: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

Leave a Reply

Your email address will not be published. Required fields are marked *