BBMP
Loading ...

RCB High Court

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೊರ್ಟ್​ ಇಂದು (ಜೂನ್​ 05) ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್​) ದಾಖಲಿಸಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿರುವ ಹೈಕೋರ್ಟ್​, ಘಟನೆಯ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮಧ್ಯಾಹ್ನ 2.30 ಕ್ಕೆ ನಿಗದಿಪಡಿಸಿದೆ. ಹೈಕೋರ್ಟ್ ಕಟ್ಟಡದ ಮೇಲೂ ಜನರು ನಿಂತಿದ್ದರು. ಇಲ್ಲಿ ಭದ್ರತಾ ಲೋಪವಾಗಿರುವುದು ಸ್ಪಷ್ಟವಾಗಿದೆ ಎಂದು ವಕೀಲರಿಂದ ಕೋರ್ಟ್​ಗೆ ಮಾಹಿತಿ ಹೋಗಿದೆ. ಜನರ ಸಾವುನೋವಿನ ಬಗ್ಗೆ ಹೈಕೋರ್ಟ್​ ಕೂಡ ಕಳವಳ ವ್ಯಕ್ತಪಡಿಸಿದೆ.

ನಡೆದಿದ್ದೇನು?
ಮಂಗಳವಾರ (ಜೂನ್​ 03) ಫೈನಲ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ತಂಡವನ್ನು ಮಣಿಸಿ, ಬುಧವಾರ (ಜೂನ್​ 04) ಅಹಮದಾಬಾದ್‌ನಿಂದ ತಮ್ಮ ತವರು ಮೈದಾನಕ್ಕೆ ಆರ್​ಸಿಬಿ ತಂಡ ಹಿಂತಿರುಗಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಯಲಿದೆ ಎಂಬ ಸುದ್ದಿ ಕೇಳಿ ಲಕ್ಷಾಂತರ ಅಭಿಮಾನಿಗಳು ಸ್ಟೇಡಿಯಂಗೆ ಜಮಾಯಿಸಿದರು. ಇತ್ತ ಸರ್ಕಾರದಿಂದ ವಿಧಾನಸೌಧದ ಮೆಟ್ಟಿಲುಗಳಲ್ಲಿ ಆರ್​ಸಿಬಿ ತಂಡ ಸನ್ಮಾನ ಸ್ವೀಕರಿಸಿದರೆ, ಅತ್ತ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಘೋರ ದುರಂತ ಸಂಭವಿಸಿತು.

ಒಂದೇ ಕಡೆ ಲಕ್ಷಾಂತರ ಮಂದಿ ಜಮಾಯಿಸಿದ್ದರು. ಅಲ್ಲದೆ, ಯಾವುದೇ ಪೂರ್ವ ಸಿದ್ಧತೆ ಇರಲಿಲ್ಲ. ಸ್ಥಳದಲ್ಲಿ ಮೆಡಿಕಲ್​ ವ್ಯವಸ್ಥೆಯು ಇರಲಿಲ್ಲ. ಸುಮಾರು 2 ಲಕ್ಷ ಅಭಿಮಾನಿಗಳು ಜಮಾಯಿಸಿದ್ದರು ಎನ್ನಲಾಗಿದೆ. ಈ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅಲ್ಲದೆ, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಐಪಿಎಲ್​ ಇತಿಹಾಸದಲ್ಲೇ ಇದೊಂದು ಕರಾಳ ಘಟನೆಯಾಗಿದೆ. ಐಪಿಎಲ್​ಗೆ ಇದೊಂದು ಕಪ್ಪು ಚುಕ್ಕಿ ಎಂದರೆ ತಪ್ಪಾಗಲಾರದು. ಈ ಘಟನೆಯ ಬಗ್ಗೆ ಕೇಳಿ ಸಚಿನ್​, ಅನೀಲ್​ ಕುಂಬ್ಳೆ ಸೇರಿದಂತೆ ಅನೇಕ ದಿಗ್ಗಜರು ಕೂಡ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ವಿರಾಟ್​ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್​ ಸಹ ಸಂತಾಪ ಸೂಚಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಘಟನೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಹ ಸಂತಾಪ ವ್ಯಕ್ತಪಡಿಸಿದೆ. ಅಲ್ಲದೆ, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಸಹ ಘೋಷಿಸಿದೆ. ಅದೇ ರೀತಿ, ಸಿಎಂ ಸಿದ್ದರಾಮಯ್ಯ, ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: 11 ಸಾವಾದರೂ ದಾಖಲಾಗಿಲ್ಲ ಒಂದೇ ಒಂದು ಎಫ್​ಐಆರ್!

Leave a Reply

Your email address will not be published. Required fields are marked *