BBMP
Loading ...

stampede-in-bengaluru-rcb-fans

ಬೆಂಗಳೂರು :- ಬರೋಬ್ಬರಿ 18 ವರ್ಷಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದು ಕೊಂಡಿತು. ಇದು ಆರ್ ಸಿಬಿ ಅಭಿಮಾನಿಗಳ ಖುಷಿಯನ್ನು ಡಬಲ್ ಮಾಡಿತ್ತು. ಅಲ್ಲದೇ ದೇಶದೆಲ್ಲೆಡೆ ಸಂಭ್ರಮ ಜೋರಾಗಿತ್ತು.

ಆದ್ರೆ ಈ ಸಂಭ್ರಮದ ಹೊತ್ತಲ್ಲೇ ಸಿಲಿಕಾನ್ ಸಿಟಿಯಲ್ಲಿ ಒಂದು ಆಚಾತುರ್ಯವೇ ನಡೆದುಹೋಯ್ತು. ಎಸ್ ಕಪ್ ಗೆದ್ದ ಖುಷಿಯಲ್ಲಿ ಯಾವುದೇ ಯೋಜನೆ ಇಲ್ಲದೇ ತರಾತುರಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಏರ್ಪಡಿಸಲಾಗಿತ್ತು. ಈ ವೇಳೆ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ನೆರೆದಿದ್ದರಿಂದ ಸುಮಾರು 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಸಾಕಷ್ಟು ಮಂದಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಇದೇ ಪ್ರಕರಣದ ಸಿಐಡಿ ತನಿಖೆ ಇಂದು ಆರಂಭವಾಗಿದೆ. ಎಸ್‌ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಡಿವೈಎಸ್‌ಪಿ ಗೌತಮ್ ಹಾಗೂ ಪುರುಷೋತ್ತಮ್ ಅವರನ್ನು ತನಿಖಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಈಗಾಗಲೇ ಕೇಸ್ ಫೈಲನ್ನು ಕಬ್ಬನ್ ಪಾರ್ಕ್ ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ. ಇಂದು ಕಾಲ್ತುಳಿತ ಉಂಟಾದ ಸ್ಥಳಕ್ಕೆ ಸಿಐಡಿ ತಂಡ ಭೇಟಿ ನೀಡಲಿದೆ.

ನೂಕು ನುಗ್ಗಲು ಉಂಟಾಗಿದ್ದ ಗೇಟ್ ನಂಬರ್ 7, 19,18, 16, 21ರ ಬಳಿ ಸಿಐಡಿ ತಂಡ ಪರಿಶೀಲನೆ ನಡೆಯಲಿದೆ. ಘಟನಾ ಸ್ಥಳ ಪರಿಶೀಲನೆ ಬಳಿಕ ಆರೋಪಿಗಳನ್ನ ಕಸ್ಟಡಿಗೆ ಪಡೆಯಲು ಸಿಐಡಿ ತಂಡ ತಯಾರಿ ನಡೆಸಲಿದೆ. ಬಹುತೇಕ ಸೋಮವಾರ ಬಾಡಿ ವಾರೆಂಟ್ ಮೇಲೆ ಬಂಧಿತ ನಾಲ್ವರು ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ಶನಿವಾರ ಸರ್ಕಾರಿ ರಜೆ ಮತ್ತು ನಾಳೆ ಭಾನುವಾರವಾದ್ದರಿಂದ ನ್ಯಾಯಾಲಯಕ್ಕೆ ರಜೆ ಇದ್ದು, ಸೋಮವಾರ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆದಿದೆ.

ರಾಜ್ಯ ಸರ್ಕಾರದಿಂದ ಒಕ್ಕಲಿಗ ಸಮುದಾಯದವರಿಗೆ ಸಿಹಿ ಸುದ್ದಿ: ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Leave a Reply

Your email address will not be published. Required fields are marked *