BBMP
Loading ...

S shivanna

ಬೆಂಗಳೂರು: ಕರ್ನಾಟಕ ರಾಜ್ಯ ರಿಗ್ ಮಾಲೀಕರ ಸಂಘದ ಪದಾಧಿಕಾರಿಗಳ ಆಯ್ಕೆ ಬಗ್ಗೆ ದಿನಾಂಕ 09.06.2025 ರಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಚ್.ಎಂ.ಬಾಬು ರವರು 10 ಮತಗಳನ್ನು ಪಡೆದು ಆಯ್ಕೆ ಆಗಿರುತ್ತಾರೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ. ಎಸ್. ರಾಜಣ್ಣ 08 ಮತಗಳನ್ನು ಪಡೆದು ಆಯ್ಕೆ ಆಗಿರುತ್ತಾರೆ.

ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಸ್.ಶಿವಣ್ಣ ರವರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಖಜಾಂಚಿ ಸ್ಥಾನಕ್ಕೆ ಕೃಷ್ಣ.ವೈ.ಎಚ್ ರವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರಕಾಶ್. ಡಿ. ರವರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ , ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾಯಿತ ಕಾರ್ಯದರ್ಶಿಯವರು ಮಾತನಾಡುತ್ತಾ, ಸಂಘದ ಏಳಿಗೆಗಾಗಿ ಶ್ರಮಿಸುವುದಾಗಿ ತಿಳಿಸುತ್ತಾ , ರಾಜ್ಯದಲ್ಲಿ ಇಲ್ಲಿಯವರೆಗೆ ಸದಸ್ಯರಾಗದೆ ಉಳಿದಿರುವ ಬೋರ್ ವೆಲ್ ಲಾರಿ ಮಾಲಿಕರನ್ನು ಸಂಘದ ಸದಸ್ಯತ್ವ ನೀಡುವ ಬಗ್ಗೆ ಮುಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿರುತ್ತಾರೆ.

ಈ ದಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಸಹಕರಿಸಿದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸಂಘದ ಇತರೆ ಸದಸ್ಯರುಗಳಿಗೆ ಕರ್ನಾಟಕ ರಿಗ್ ಓನರ್ಸ್ ಸಂಘದ ಕಾರ್ಯದರ್ಶಿ ಎಸ್ ಶಿವಣ್ಣ ಕೃತಜ್ಞತೆ ಸಲ್ಲಿಸಿರುತ್ತಾರೆ.

Leave a Reply

Your email address will not be published. Required fields are marked *