BBMP
Loading ...

BESCOM

ಬೆಂಗಳೂರು : ಕಳೆದ ವರ್ಷ ಬೆಂಗಳೂರಿನಲ್ಲಿ ಫುಟ್ಪಾತ್ ಮೇಲೆ ನಡೆದುಕೊಂಡು ಹೋಗುವಾಗ ವಿದ್ಯುತ್ ಪ್ರವಹಿಸಿ ತಾಯಿ ಮತ್ತು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದ್ದು, ವಿದ್ಯುತ್ ಕಂಬದ ಬಳಿ ಆಟ ಆಡುತ್ತಿರುವಾಗ ವಿದ್ಯುತ್ ಪ್ರವಹಿಸಿ 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಹೌದು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ 11 ವರ್ಷದ ಮಗು ಇದೀಗ ಬಲಿಯಾಗಿದೆ. ವಿದ್ಯುತ್ ಪ್ರವಹಿಸಿ 11 ವರ್ಷದ ಬಾಲಕಿ ತನಿಷ್ಕ ಸಾವನಪ್ಪಿದ್ದಾಳೆ. ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ಈ ಒಂದು ದುರಂತ ಸಂಭವಿಸಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನಾರಾಯಣಘಟ್ಟ ಗ್ರಾಮದಲ್ಲಿ ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ದುರ್ಘಟನೆ ನಡೆದಿದೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಇದೀಗ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ಕುರಿತಂತೆ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಸದ್ದಿಲ್ಲದೇ ಕ್ಲೋಸ್‌ ಆಗುತ್ತಿವೆ ಡಜನ್‌ಗಟ್ಟಲೆ ಪಿಜಿಗಳು: ವ್ಯವಹಾರ ಕುಸಿತಕ್ಕೆ ಕಾರಣವೇನು?

Leave a Reply

Your email address will not be published. Required fields are marked *