ಬೆಂಗಳೂರು: ನಾಳೆ ನಗರದಲ್ಲಿ ಕಾವೇರಿ ನೀರು ಸರಬರಾಜು ಸಂಪೂರ್ಣ ಸ್ಥಗಿತ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದಿನ ದಿನ ಬೆಳಗ್ಗೆ ಅಂದರೆ ಶುಕ್ರವಾರ ಬೆಳಗ್ಗೆ 6 ಗಂಟೆವರೆಗೂ ಕಾವೇರಿ ನೀರು ಸರಬರಾಜು ಸಂಪೂರ್ಣ ಸ್ಥಗಿತ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಜಲಮಂಡಳ ಈ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಿದೆ.
ನಾಳೆ ಕಾವೇರಿ ನೀರು ತಾತ್ಕಾಲಿಕ ಸ್ಥಗಿತದ ಹಿಂದೆ ಇರುವ ಮುಖ್ಯ ಕಾರಣವೆಂದರೆ, ಕಾವೇರಿ 5ನೇ ಹಂತದ ಕೊಳವೆ ಮಾರ್ಗವನ್ನು ಜೋಡಿಸುವ ತುರ್ತು ನಿರ್ವಹಣಾ ಕಾಮಗಾರಿಗಳು ನಡೆಯಲಿದೆ. ಈ ಕಾಮಗಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವುದರೊಂದಿಗೆ, ಮುಂದಿನ ದಿನಗಳಲ್ಲಿ ನಗರಕ್ಕೆ ಉತ್ತಮ ಪ್ರಮಾಣದಲ್ಲಿ ಮತ್ತು ಸ್ಥಿರವಾಗಿ ನೀರು ಸರಬರಾಜು ಮಾಡುವ ಉದ್ದೇಶವಿದೆ.
ಹೀಗಾಗಿ ನಾಳೆ ಸಂಪೂರ್ಣ ದಿನ ನಗರದ ಬಹುತೇಕ ಪ್ರದೇಶಗಳಿಗೆ ನೀರು ಪೂರೈಕೆ ಸ್ಥಗಿತವಾಗಲಿದ್ದು, ಸಾರ್ವಜನಿಕರು ಅಗತ್ಯವಿರುವ ನೀರನ್ನು ಮುಂಗಡವಾಗಿ ಸಂಗ್ರಹಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.
ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ಪ್ರಮಾಣ ಪತ್ರ ನೀಡಲು 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಸರ್ಕಾರಿ ನೌಕರ


