BBMP
Loading ...

Lokayukta

ಮೈಸೂರು : ವ್ಯಕ್ತಿಯೊಬ್ಬರಿಗೆ ಇ ಸ್ವತ್ತು ಮಾಡಿ ಕೊಡಲು ಕಂದಾಯ ಅಧಿಕಾರಿ ಹಾಗೂ ಬಿಲ್ ಕಲೆಕ್ಟರ್ ಇಬ್ಬರು ಸೇರಿ 25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ 25,000 ಈ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಹೌದು ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ರೇಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25,000 ಲಂಚ ಸ್ವೀಕರಿಸುವಾಗ ರೆಡ್ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಲೋಕಾಯುಕ್ತ ಅಧಿಕಾರಿಗಳು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ.

ಪಾಲಿಕೆ ವಲಯ ಕಚೇರಿಯ ಬಿಲ್ ಕಲೆಕ್ಟರ್ ರಜಾಕ್ ಹಾಗೂ ಕಂದಾಯ ಅಧಿಕಾರಿ ನಂದೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಸ್ ಪಿ ಟಿಜೆ ಉದೇಶ್ ಮಾರ್ಗದರ್ಶನದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ. ಇ ಸ್ವತ್ತು ಮಾಡಿಕೊಡಲು 25,000 ಲಂಚ ಸ್ವೀಕಾರ ಮಾಡುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ. ಸದ್ಯ ಇಬ್ಬರನ್ನು ವಶಕ್ಕೆ ಪಡೆದುಕೊಂಡು ಲೋಕಾಯುಕ್ತ ಅಧಿಕಾರಿಗಳು, ವಿಚಾರಣೆ ನಡೆಸುತ್ತಿದ್ದಾರೆ.

ಊಹೆಗೂ ನಿಲುಕದ ಆಘಾತ ಎದುರಾಗಲಿದೆ: ಮತ್ತೊಂದು ಗಂಡಾಂತರದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀಗಳು

Leave a Reply

Your email address will not be published. Required fields are marked *