ಬೆಂಗಳೂರು:- ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಬಿಎಂಪಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಪ್ರಕಾಶ್ರಿಗೆ ಸಂಬಂಧಪಟ್ಟಂತೆ ದಾಳಿ ನಡೆದಿದೆ.
ಕಚೇರಿ,ಮನೆ ಸೇರಿದಂತೆ ನಗರದ ಒಟ್ಟು ಐದು ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲಿಸಲಾಗುತ್ತಿದೆ. ಗೋವಿಂದರಾಜನಗರ ವಿಭಾಗದ ಎಕ್ಸಿಕ್ಯೂಟಿವ್ ಎಂಜಿನಿಯರ್ ಪ್ರಕಾಶ್ ಅವರ ನಾಗರಬಾವಿ, ಗೋವಿಂದರಾಜನಗರ,ಯಲಹಂಕ ಭಾಗಗಳಲ್ಲಿರುವ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲಿಸಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿದ ಆರೋಪದಲ್ಲಿ, ದಾಳಿ ನಡೆಸಿದ ಅಧಿಕಾರಿಗಳು, ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಜೂನ್ 26ರಂದು ಇಂಧನ ಇಲಾಖೆ ವಿದ್ಯುತ್ ಪರಿವೀಕ್ಷಣಾಲಯದಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಕಾರ್ಯಕ್ರಮ


