BBMP
Loading ...

ಬೆಂಗಳೂರು: ವಿದ್ಯುತ್ ಗ್ರಾಹಕರ ಕನಿಷ್ಠ ವಿದ್ಯುತ್ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ನಿನ್ನೆ ಅರ್ಜಿಯ ವಿಚಾರಣೆ ನಡೆಸಿದಂತ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದಂತ ನ್ಯಾಯಪೀಠವು ಈ ಆದೇಶ ಮಾಡಿದೆ. ತಿದ್ದುಪಡಿ ನಿಯಮ ಪ್ರಶ್ನಿಸಿ 2008ರಲ್ಲಿ ಬೆಂಗಳೂರಿನ ಸೋನಾ ಸಿಂಥೆಟಿಕ್ಸ್ ಕಂಪನಿ, ಶ್ರೀ ಕೃಷ್ಣ ಸ್ಟಿನ್ನಿಂಗ್ ಮತ್ತು ವೀವಿಂಗ್ ಮಿಲ್ಸ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ 10 ಕಂಪನಿಗಳು, 2009ರಲ್ಲಿ ಎಫ್.ಕೆ.ಸಿ.ಸಿ.ಐ. ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಪೀಠದಿಂದ ಈ ಮಹತ್ವದ ಆದೇಶ ಹೊರಡಿಸಲಾಗಿದೆ.

ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್ ಸೆಟ್ ಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವರ್ಗದ ವಿದ್ಯುತ್ ಬಳಕೆ ಮಾಡುವ ಗ್ರಾಹಕರಿಗೆ ಕನಿಷ್ಠ ಶುಲ್ಕದ ಮೇಲೆ ವಿಧಿಸಲು ಕರ್ನಾಟಕ ವಿದ್ಯುತ್ ಬಳಕೆ ಮೇಲಿನ ತೆರಿಗೆ ಕಾಯ್ದೆಗೆ ರಾಜ್ಯ ಸರ್ಕಾರ ತಂದಿದ್ದ ತಿದ್ದುಪಡಿ ನಿಯಮ ಆಸಾಂವಿಧಾನಿಕ ಎಂದು ಹೈಕೋರ್ಟ್ ಘೋಷಿಸಿದೆ.

ಬಳಸಿದಂತ ವಿದ್ಯುತ್ ಶುಲ್ಕಕ್ಕೆ ಮಾತ್ರವೇ ತೆರಿಗೆ ವಿಧಿಸಬಹುದು. ಆದರೇ ಕನಿಷ್ಠ ವಿದ್ಯುತ್ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ. ಗ್ರಾಹಕರು ಬಳಸದ ವಿದ್ಯುತ್ ಗೆ ತೆರಿಗೆ ಕಟ್ಟಬೇಕಿಲ್ಲವೆಂದು ತೀರ್ಪು ನೀಡಿದೆ. ಇನ್ನೂ ಕರ್ನಾಟಕ ವಿದ್ಯುತ್ ಕಾಯ್ದೆ ಸೆಕ್ಷನ್.3(1)ರ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಮೂಲಕ ಗ್ರಾಹಕರ ಕನಿಷ್ಠ ವಿದ್ಯುತ್ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ ಎಂಬುದಾಗಿ ಮಹತ್ವದ ತೀರ್ಪು ನೀಡಿದೆ.

ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ಮನೆ ಕಟ್ಟಬೇಡಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ

Leave a Reply

Your email address will not be published. Required fields are marked *