BBMP
Loading ...

BESCOM

ಬೆಂಗಳೂರು: ಬೆಸ್ಕಾಂ ವಿದ್ಯುತ್‌ ಸಂಪರ್ಕದಲ್ಲಿ ಜುಲೈ 1 ರಿಂದ ಮಹತ್ವದ ಬದಲಾವಣೆಯಾಗಿದೆ. ಗ್ರಾಮೀಣ ಭಾಗದಲ್ಲಿ ಹೊಸ ಸಂಪರ್ಕ ಹಾಗೂ ತಾತ್ಕಾಲಿಕ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್‌ ಕಡ್ಡಾಯ ಮಾಡಲಾಗಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025 ರ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸಬೇಕಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ.

ನಗರ ಪ್ರದೇಶಗಳಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಆರಂಭ
ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ 2025ರ ಫೆಬ್ರವರಿ 15ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದ್ದು, ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗು ಕೂಡಾ ಯೋಜನೆ ವಿಸ್ತರಿಸಲಾಗಿದೆ. ಹೊಸ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್‌ ಮೀಟರ್‌ಗಳನ್ನು ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್ 06 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಮಾರ್ಟ್‌ ಮೀಟರ್‌ ವೈಶಿಷ್ಟ್ಯ ಏನು?
* ಹಳೆಯ ಮಾದರಿಯ ಮೀಟರ್‌ಗಳಿಗಿಂತ ವಿಶಿಷ್ಟವಾಗಿರುವ ಸ್ಮಾರ್ಟ್‌ ಮೀಟರ್‌ಗಳು ಜಿಪಿಆರ್‌ಎಸ್‌/ಆರ್ ಎಫ್ ಆಧಾರಿತ ಸಂವಹನ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್ ಸಂಪರ್ಕ ಹೊಂದಿರುತ್ತದೆ.
* ಅಡ್ವಾನ್ಸ್‌ಡ್ ಮೀಟರಿಂಗ್ ಇನ್ಫ್ರಾಸ್ಟ್ರಕ್ಚರ್ (ಎಎಂಐ) ತಂತ್ರಜ್ಞಾನದ ಸ್ಮಾರ್ಟ್‌ ಮೀಟರ್‌ಗಳು ವಿದ್ಯುತ್ ಬಳಕೆ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಗ್ರಾಹಕರು ಹಾಗೂ ಬೆಸ್ಕಾಂ ನಡುವೆ ನೇರ ಸಂಪರ್ಕ ಕಲ್ಪಿಸಲಿದೆ.
* ಮೊಬೈಲ್ ಅಪ್ಲಿಕೇಶನ್ ಮೂಲಕ ನೈಜ ಸಮಯದ ವಿದ್ಯುತ್ ಬಳಕೆ, ವೊಲ್ಟೇಜ್, ಪವರ್ ಫ್ಯಾಕ್ಟರ್ ಮಾಹಿತಿ ಹಾಗೂ ರೀಚಾರ್ಜ್ ಸೌಲಭ್ಯ ಪಡೆಯಬಹುದಾಗಿದೆ.
* ಮುಂಚಿತವಾಗಿ ಹಣ ಪಾವತಿಸಿ ತಮ್ಮ ಆಯ್ಕೆಯ ದಿನಗಳ ಅವಧಿಗೆ ರಿಜಾರ್ಜ್‌ ಮಾಡಿಕೊಳ್ಳಬಹುದು.
* ಒಂದು ವೇಳೆ ವಿದ್ಯುತ್ ಕಡಿತಗೊಂಡರೆ ಗ್ರಾಹಕರು ಬಿಲ್ ಪಾವತಿಸಿದ ತಕ್ಷಣ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಹುದಾಗಿದೆ.

VIDEO| ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಕೆಂಪೇಗೌಡರ 516ನೇ ಜಯಂತಿ ಆಚರಣೆ; ಸಿಎಂ, ಡಿಸಿಎಂ ಭಾಗಿ

Leave a Reply

Your email address will not be published. Required fields are marked *