BBMP
Loading ...

Smart Meter

ಇಂದಿನಿಂದ (ಜುಲೈ 01) ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯ ನಿಯಮ ಜಾರಿಯಾಗುತ್ತಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (ಬೆಸ್ಕಾಂ) ತನ್ನ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಜುಲೈ 1ರಿಂದ ಅನ್ವಯವಾಗುವಂತೆ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್​ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ ಜಾರಿ ಮಾಡಿದೆ.

ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸುತ್ತಿರುವ ಬಗ್ಗೆ ಹೈಕೋರ್ಟ್ ಕಾಂಗ್ರೆಸ್‌ ಸರ್ಕಾರಕ್ಕೆ ನೋಟಿಸ್ ನೀಡಿದ್ದರೂ ಕೂಡ ಲೆಕ್ಕಿಸದೇ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಹಳ್ಳಿಗಳಲ್ಲೂ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲು ಸೂಚಿಸಿದೆ. ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರ ಖಜಾನೆ ತುಂಬಿಸಿಕೊಳ್ಳಲು ₹900 ಇದ್ದ ಮೀಟರ್ ದರವನ್ನು, ಸ್ಮಾರ್ಟ್ ಮೀಟರ್ ಹೆಸರಿನಲ್ಲಿ ಗ್ರಾಹಕರಿಂದ ₹9,000 ಹಗಲು ದರೋಡೆ ಮಾಡುತ್ತಿದೆ ಎಂದು ಆರೋಪಿಸಿದೆ.

ಬೆಸ್ಕಾಂ ವ್ಯಾಪ್ತಿಗೆ ಒಳಪಡುವ ಬೆಂಗಳೂರು, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಹಕರು ಇನ್ಮುಂದೆ ಹೊಸ ವಿದ್ಯುತ್ ಸಂಪರ್ಕ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳುವುದು ಕಡ್ಡಾಯ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನ ಕಡ್ಡಾಯಗೊಳಿಸಿರುವುದಾಗಿ ಬೆಸ್ಕಾಂ ತಿಳಿಸಿದೆ.

ಏನಿದು ಸ್ಮಾರ್ಟ್‌ ಮೀಟರ್‌?
ಬೆಸ್ಕಾಂ ವ್ಯಾಪ್ತಿಗೆ ಒಳಪಡುವ ಬೆಂಗಳೂರು ನಗರವು ಸೇರಿದಂತೆ ಎಲ್ಲ ನಗರ ಪ್ರದೇಶಗಳಲ್ಲಿ ಕಳೆದ ಫೆಬ್ರವರಿಯಿಂದಲೇ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭವಾಗಿದ್ದು, ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿಯೂ ಕೂಡ ಸ್ಮಾರ್ಟ್ ಮೀಟರ್ ಅಳವಡಿಸುವ ಯೋಜನೆ ವಿಸ್ತರಿಸಣೆ ಮಾಡಲಾಗುತ್ತಿದೆ. ಅದರಂತೆ ಇನ್ನು ಮುಂದೆ ಯಾವುದೇ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸುವ ಮೂಲಕ ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಈ ಸ್ಮಾರ್ಟ್‌ ಮೀಟರ್‌ಗಳನ್ನು ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬೇಕು.

ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್ ತಿಂಗಳಲ್ಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ಇದು ಜಿಪಿಆರ್‌ಎಸ್‌/ಆರ್​ಎಫ್ ಆಧಾರಿತ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್ ಸಂಪರ್ಕವನ್ನು ಹೊಂದಿರುತ್ತದೆ. ಅಡ್ವಾನ್ಸ್ಡ್‌ ಮೀಟರಿಂಗ್ ಇನ್‌ಫ್ರಾಸ್ಟ್ರಕ್ಚರ್‌ (ಎಎಂಐ) ತಂತ್ರಜ್ಞಾನದ ಸ್ಮಾರ್ಟ್‌ ಮೀಟರ್‌ಗಳು ವಿದ್ಯುತ್ ಬಳಕೆ ಬಗ್ಗೆ ಮಾಹಿತಿ ಸಂಗ್ರಹಿಸಿ ಗ್ರಾಹಕರು ಹಾಗೂ ಬೆಸ್ಕಾಂ ನಡುವೆ ನೇರ ಸಂಪರ್ಕ ಕಲ್ಪಿಸುತ್ತೆ.

ಮೊಬೈಲ್ ಆಪ್‌ ಮೂಲಕವೂ ನೈಜ ಸಮಯದ ವಿದ್ಯುತ್ ಬಳಕೆ, ವೊಲ್ಟೇಜ್ ಮಾಹಿತಿ ಹಾಗೂ ರೀಚಾರ್ಜ್ ಸೌಲಭ್ಯವೂ ಪಡೆಯಬಹುದು. ಹಣ ಮುಂಚಿತವಾಗಿಯೇ ಪಾವತಿಸಿ ತಮ್ಮ ಆಯ್ಕೆಯ ದಿನಗಳ ಅವಧಿಗೆ ಮಾತ್ರ ರಿಚಾರ್ಜ್‌ ಮಾಡಿಕೊಳ್ಳುವ ವ್ಯವಸ್ಥೆಯೂ ಇದರಲ್ಲಿದೆ. ಒಂದು ವೇಳೆ ವಿದ್ಯುತ್ ಕಡಿತಗೊಂಡರೆ ಗ್ರಾಹಕರು ಬಿಲ್ ಪಾವತಿಸಿದ ತಕ್ಷಣ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಹುದಾಗಿದೆ.

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ

Leave a Reply

Your email address will not be published. Required fields are marked *