BBMP
Loading ...

Siddaramaiah-fb-1024x576

ಬೆಂಗಳೂರು: ಸಣ್ಣ ವ್ಯಾಪಾರಿಗಳಿಗೆ ಬಿಗ್ ರಿಲೀಫ್‌ ಸಿಕ್ಕಿದ್ದು, ನೋಟಿಸ್ ನೀಡಿದ್ರೂ ತೆರಿಗೆ ವಸೂಲಿ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆʼ.

ಜಿಎಸ್ಟಿ ನೊಟೀಸ್ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕುʼ ಎಂದರು.

ಇನ್ನೂ ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕುʼ. ಜಿಎಸ್ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು ಎಂದು ಹೇಳಿದರು.

ನೊಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.

ಮೃತ ವ್ಯಕ್ತಿಯ ಹೆಸರಲ್ಲಿ ಜಮೀನಿದ್ರೆ ಕಿಸಾನ್ ಸಮ್ಮಾನ್ ಸೇರಿ ಸರ್ಕಾರದ ಯಾವುದೇ ಸೌಲಭ್ಯ ಸಿಗಲ್ಲ: ಸಚಿವ ಕೃಷ್ಣ ಬೈರೇಗೌಡ

Leave a Reply

Your email address will not be published. Required fields are marked *