ಬೆಂಗಳೂರು: ವಿವಿಧ ಯೋಜನೆಗಳ ಅಡಿ ಫಲಾನುಭವಿಗಳಾಗಿ ಆಯ್ಕೆಯಾದ 10-15 ಸಾವಿರ ಜನರಿಗೆ ಸೌಲಭ್ಯಗಳ ಹಂಚಿಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಅವರು ವಿಧಾನಸೌಧದಲ್ಲಿ ಮಂಗಳವಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.
3,700 ಬೀದಿಬದಿ ವ್ಯಾಪಾರಿಗಳು ತಳ್ಳುವ ಗಾಡಿಗಳಿಗೆ ಅರ್ಜಿ ಸಲ್ಲಿಸಿದ್ದರು. ಅವರಿಗೆ ಸೌಲಭ್ಯ ನೀಡಲಾಗುತ್ತಿದೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಆಗಸ್ಟ್ 15 ರೊಳಗೆ ಹೆಬ್ಬಾಳ ಜಂಕ್ಷನ್ ಉದ್ಘಾಟನೆ
ಹೆಬ್ಬಾಳ ಮೇಲ್ಸೆತುವೆ ಜಂಕ್ಷನ್, ಶಿವಾನಂದ ಸರ್ಕಲ್ ಜಂಕ್ಷನ್ ಅಭಿವೃದ್ಧಿ ಹಾಗೂ ಗಾಂಧಿ ಬಜಾರ್ ಬಳಿಯ ಬಹುಮಹಡಿ ಪಾರ್ಕಿಂಗ್ ಕಟ್ಟಡವನ್ನು ಆಗಸ್ಟ್ 15ರ ಒಳಗಾಗಿ ಉದ್ಘಾಟನೆ ಮಾಡಬೇಕು ಎಂಬುದು ನಮ್ಮ ಆಲೋಚನೆ. ಕೆ.ಆರ್.ಪುರಂ ಕಡೆಯಿಂದ ಬರುವ ಹೆಬ್ಬಾಳ ಮೇಲ್ಸೆತುವೆ ಕಾಮಗಾರಿಯನ್ನು ಶೀಘ್ರದಲ್ಲೇ ಮುಗಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು ಎಂಬುದು ನಮ್ಮ ಆಲೋಚನೆಯಾಗಿದೆ ಎಂದರು.
ಬಿಬಿಎಂಪಿ ವಾರ್ಡ್ ರದ್ದು: ಗ್ರೇಟರ್ ಬೆಂಗಳೂರು ಅನುಸಾರ ಆ.3ರಿಂದ ಹೊಸ ವಾರ್ಡ್‌ಗಳ ರಚನೆ!


