BBMP
Loading ...

Darshan Fans

ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಟಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ನೀಡಿರುವ ದೂರಿನ ಬಗ್ಗೆ ಸಿಸಿಬಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಇದೀಗ ಮೂವರು ಕಿಡಿಗೇಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗದ ಮೂಲದ ಓರ್ವ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

43 ಇನ್ಸ್ಟಾ ಅಕೌಂಟ್ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟಿ ರಮ್ಯಾ ಬಳಿ ಸೈಬರ್ ಕ್ರೈಂ ಪೊಲೀಸರು ಅಶ್ಲೀಲ ಮೆಸೇಜ್ ಅಕೌಂಟ್ ಗಳ ಕುರಿತು ಮಾಹಿತಿ ಪಡೆದಿದ್ದಾರೆ. ಯಾವ ಪೇಜ್ ಗಳಿಂದ ಅಶ್ಲೀಲ ಮೆಸೇಜ್ ಗಳು ಬಂದಿದ್ದವು? ಯಾವ ನಂಬರ್ ಗಳಿಂದ ಬೆದರಿಕೆ ಕರೆ ಬಂದಿತ್ತು? ಯಾವ ಅಕೌಂಟ್ ಗಳಿಂದ ಅಶ್ಲೀಲ ಮೆಸೇಜುಗಳು ಬಂದಿದ್ದವು? ಎಂದು ಎಲ್ಲದರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿದ್ದಾರೆ.

20 ಸಾವಿರ ಲಂಚ ಆರೋಪ ಸಾಬೀತು: ಕುಣಿಗಲ್​ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಗೆ 4 ವರ್ಷ ಕಠಿಣ ಶಿಕ್ಷೆ

Leave a Reply

Your email address will not be published. Required fields are marked *