ಚಿಕ್ಕಮಗಳೂರು: ಗುತ್ತಿಗೆದಾರರ ಬಾಕಿ ಬಿಲ್ ಪಾವತಿಗೆ 25 ಸಾವಿರ ರೂ. ಲಂಚ ಪಡೆಯುತ್ತಿದ್ದ, ಕೊಪ್ಪ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರ ದೇಸಾಯಿ ಬಾಕಿ ಬಿಲ್ ಪಾವತಿಗೆ ಕೋರಿದ್ದರು. 7.50 ಲಕ್ಷ ರೂಪಾಯಿ ಪಾವತಿಗೆ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಗಳವಾರ 25 ಸಾವಿರ ರೂಪಾಯಿ ಪಡೆಯುವಾಗ ಸಿಕ್ಕಿಬಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.


