BBMP
Loading ...

Darshan

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ಎ2 ಆರೋಪಿ ದರ್ಶನ್ ಮತ್ತು ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನನ್ನು ಕಡೆಗೂ ಸುಪ್ರೀಂಕೋರ್ಟ್​ ರದ್ದುಗೊಳಿಸಿದೆ.

ಆ.14ಕ್ಕೆ ತೀರ್ಪನ್ನು ಕಾಯ್ದಿರಿಸಿದ್ದ ನ್ಯಾಯಾಲಯ, ಕಡೆಗೂ ರಾಜ್ಯ ಸರ್ಕಾರ ಪರ ತೀರ್ಪು ನೀಡಿದೆ. ಎ2 ಆರೋಪಿ ದರ್ಶನ್​ ಮತ್ತು ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನನ್ನು ರದ್ದುಗೊಳಿಸುವಂತೆ ಸರ್ಕಾರ ಪರ ವಕೀಲರು ಪ್ರಬಲ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಸೂಕ್ಷ್ಮವಾಗಿ ಗಮನಿಸಿದ ಸುಪ್ರೀಂಕೋರ್ಟ್​, ಕಡೆಗೂ ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಮೂಲಕ ದರ್ಶನ್​ಗೆ ಜೈಲು ದರ್ಶನ ತೋರಿಸಿದೆ.

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿ ಜೈಲಿನ ಲಾನ್​ನಲ್ಲಿ ಸಿಗರೇಟ್​ ಸೇದುವುದು ಕಂಡಬಂದರೆ ಜೈಲಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಕೋರ್ಟ್​ ಎಚ್ಚರಿಸಿದೆ.

Leave a Reply

Your email address will not be published. Required fields are marked *