BBMP
Loading ...

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ವಿಲ್ಸನ್‌ ಗಾರ್ಡ್‌ನ ಚಿನ್ನಯ್ಯನ ಪಾಳ್ಯದಲ್ಲಿ ಅನುಮಾಸ್ಪದ ಸ್ಪೋಟವಾಗಿದೆ. ಈ ಘಟನೆಯಲ್ಲಿ ಏಳು ಮಂದಿಗೆ ಗಾಯವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಸ್ವಾತಂತ್ರ್ಯ ದಿನದಂದೇ ಈ ಘಟನೆ ನಡೆದಿದೆ. ಸ್ಫೋಟದಿಂದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಈ ಸ್ಫೋಟದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ದಕ್ಷಿಣ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಸದ್ಯ ತನಿಖೆಯು ಚಾಲನೆಯಲ್ಲಿದ್ದು, ಹೆಚ್ಚಿನ ವಿವರಗಳಿಗಾಗಿ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಈ ಘಟನೆಯ ಬಗ್ಗೆ ಯಾವುದೇ ಊಹಾಪೋಹಗಳಿಗೆ ಕಿವಿಗೊಡದಂತೆ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಆದರೆ, ಘಟನೆ ಬಗ್ಗೆ ಸ್ಥಳಿಯ ಜನತೆ ಅನುಮಾನ ಹೊರಹಾಕಿದ್ದಾರೆ. ಅಲ್ಲದೆ, ಹೆಚ್ಚಿನ ತನಿಖೆಗಾಗಿ ಪೊಲೀಸರನ್ನು ಸ್ಥಳೀಯ ಜನರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *