ಬೆಂಗಳೂರು: ಬೆಂಗಳೂರಿನ ನಗರ್ತಪೇಟೆ ನಡೆದ ಬೆಂಕಿ ಅವಘಡಕ್ಕೆ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಇನ್ನೂ ಬೆಂಗಳೂರಿನ ನಗರ್ತಪೇಟೆ ನಡೆದ ಬೆಂಕಿ ಅವಘಡಕ್ಕೆ 5 ಬಲಿಯಾದ ಘಟನೆ ಬಗ್ಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿಕೆ ನೀಡಿದ್ದಾರೆ.
ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು.. ಅಗ್ನಿಶಾಮಕ ದಳದವರು ನಮ್ಮ ಪೊಲೀಸ್ರು ಪರಿಶೀಲನೆ ಮಾಡ್ತಿದ್ದಾರೆ.. ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹತ್ತಿದ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದ್ರೆ ಒಂದು ಫ್ಯಾಮಿಲಿ ಅದ್ರಲ್ಲಿ ಸಿಲುಕಿದ ಬಗ್ಗೆ ಮಾಹಿತಿ ಇದೆ. ಎರಡು ಮೃತದೇಹಗಳನ್ನ ಈಗಾಗಲೇ ಹೊರ ತೆಗೆಯಲಾಗಿದೆ ಮೇಲಿನ ಫ್ಲೋರ್ ನಲ್ಲಿ ಕಂಪ್ಲೀಟ್ ಬೆಂಕಿ, ಫಾಗ್ ಆವರಿಸಿದೆ.
ಒಳಗಡೆ ಹೋಗೋದಕ್ಕೆ ಆಗ್ತಿಲ್ಲ, ಹೀಗಾಗಿ ಒಳಗಡೆ ಸಿಲುಕಿದವರನ್ನ ಹುಡುಕಲು ಆಗ್ತಿಲ್ಲ. ಕಾರ್ಯಾಚರಣೆ ಮುಂದುವರೆಸಲಾಗಿದೆ. ಅಗ್ನಿಶಾಮಕದವರು, ಎಫ್ ಎಸ್ ಎಲ್, ನಮ್ಮವರು ಕಾರ್ಯಾಚರಣೆ ಮಾಡ್ತಿದ್ದಾರೆ. ಇನ್ನು ಮೃತದೇಹಗಳು ಇರುವ ಶಂಕೆ ಇದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.


