BBMP
Loading ...

DKS

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಿಗೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದು ಹಾಗೂ ಕಾಮಗಾರಿ ಪೂರ್ಣಗೊಂಡಿರುವ ಕಟ್ಟಡಗಳಿಗೆ ಕಡ್ಡಾಯಗೊಳಿಸಿರುವ ಸ್ವಾಧೀನಾನುಭವ ಪತ್ರದಿಂದ (ಒಸಿ) ವಿನಾಯಿತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 20ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರಭಟನೆಗೆ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾದರರ ಸಂಘ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ.

ವಿದ್ಯುತ್ ಗುತ್ತಿಗೆದಾದರರ ಸಂಘದ ಬೇಡಿಕೆಯನ್ನು ನಿನ್ನೆ ವಿಧಾನ ಸಭೆಯ ಕಲಾಪದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಸ್ತಾಪ ಮಾಡಿದರು. ಸುಪ್ರೀಂಕೋರ್ಟ್ ಆದೇಶದಂತೆ ವಾಸ ಯೋಗ್ಯ ಪ್ರಮಾಣ ಪತ್ರ(ಓಸಿ) ಪಡೆದುಕೊಳ್ಳದ 4 ಲಕ್ಷ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರು ನಿಲ್ಲಿಸಲಾಗಿದೆ. ಇವುಗಳಲ್ಲಿ 30X40 ಅಳತೆಯ ಎರಡು ಮಹಡಿ ಕಟ್ಟಡಗಳಿಗೆ ವಿನಾಯಿತಿ ನೀಡುವ ಕುರಿತಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗುವುದು ಎಂದು ತಿಳಿಸಿದರು.

ಡಿಕೆ ಶಿವಕುಮಾರ್​ ಅವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ನಾಳೆ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಒಂದು ವೇಳೆ ಭರವಸೆ ಈಡೇರಿದಿದ್ದರೆ ಮುಂದಿನ ದಿನಗಳಲ್ಲಿ ಭಾರಿ ಪ್ರತಿಭಟನೆ ನಡೆಸಲಾಗುವುದು ಎಂದು ವಿದ್ಯುತ್ ಗುತ್ತಿಗೆದಾದರರ ಸಂಘದ ಹೋರಾಟ ಸಮಿತಿಯ ಚೇರ್ಮನ್​ ವೈ.ಎಚ್​. ಆನಂದ್​ ಅವರು ತಿಳಿಸಿದ್ದಾರೆ.

ಸಂಘದ ಬೇಡಿಕೆ ಏನಿದೆ?
ಕಳೆದ ಬುಧವಾರ (ಆಗಸ್ಟ್​ 13) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ. ರಮೇಶ್, ‘ಸುಪ್ರೀಂ ಕೋರ್ಟ್‌ನ ಆದೇಶದಂತೆ ಕಳೆದ ಏಪ್ರಿಲ್‌ನಿಂದ ಇದುವರೆಗೂ ಎಂಟು ಲಕ್ಷ ಮನೆ ಹಾಗೂ ಕೈಗಾರಿಕೆಗಳಿಗೆ ವಿದ್ಯುತ್‌ ಸಂಪರ್ಕ ನೀಡಿಲ್ಲ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದ್ದು, ಈ ಆದೇಶವನ್ನು ಕೂಡಲೇ ಹಿಂಪಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಎಸ್ಕಾಂಗಳಲ್ಲಿ ಕರೆದಿರುವ ಬೃಹತ್‌ ಟೆಂಡರ್‌ಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ಈ ಬಗ್ಗೆ ಇಂಧನ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಪ್ರಥಮ ದರ್ಜೆ ಗುತ್ತಿಗೆದಾರರ ಪರವಾನಗಿ ಪಡೆಯಲು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಕಡ್ಡಾಯ ಮಾಡಲಾಗಿದೆ. ಇದರಿಂದ ವಿನಾಯಿತಿ ನೀಡಬೇಕು. ಅನುಭವದ ಆಧಾರದ ಮೇಲೆ ಪ್ರಥಮ ದರ್ಜೆ ಗುತ್ತಿಗೆದಾರರ ಪರವಾನಗಿ ನೀಡಬೇಕು ಎಂದರು.

66/11ಕೆವಿ ಹಾಗೂ 110/11 ವಿದ್ಯುತ್‌ ವಿತರಣಾ ಕೇಂದ್ರಗಳ ಪಾಳಿ ಗುತ್ತಿಗೆ ಕಾಮಗಾರಿಗಳನ್ನು ನಿರ್ವಹಿಸಲು ಪ್ರಥಮ ದರ್ಜೆ ಗುತ್ತಿಗೆದಾರರಿಗೆ ಅನುಮತಿ ನೀಡಬೇಕು. ಎಸ್ಕಾಂಗಳಲ್ಲಿ ವಿದ್ಯುತ್‌ ಗುತ್ತಿಗೆದಾರರು ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ವಿದ್ಯುತ್ ಅವಘಡಗಳಲ್ಲಿ ಅಪಘಾತ ಅಥವಾ ಮರಣ ಹೊಂದಿದರೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *