ಬೆಂಗಳೂರು: ಕಳೆದ ಆಗಸ್ಟ್ 15 ರಂದು ಆಡುಗೋಡಿಯ ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿತ್ತು. ಸ್ಫೋಟದಿಂದ ಅಕ್ಕಪಕ್ಕದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿತ್ತು. ಗಾಯಾಳುಗಳು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಾಗಿದ್ದರು.
ಸದ್ಯ ಪ್ರಾಥಮಿಕ ತನಿಖೆಯಲ್ಲಿ ದುರಂತಕ್ಕೆ ಕಾರಣವೇನೆಂಬುವುದು ಗೊತ್ತಾಗಿದೆ. ಅಡುಗೆ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿದೆ ಎಂದು ತನಿಖೆ ವೇಳೆ ಬಹಿರಂಗಗೊಂಡಿದೆ. ಮನೆಯಲ್ಲಿ ರಾತ್ರಿಯೆಲ್ಲ ಗ್ಯಾಸ್ ಸೋರಿಕೆಯಾಗಿತ್ತು. ಬೆಳಗ್ಗೆ ಮಗು ಟಿವಿ ಆನ್ ಮಾಡಿದಾಗ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಫೋಟಗೊಂಡ ದಿನ ಮುಬಾರಕ್ ಎಂಬ ಬಾಲಕ ಮೃತಪಟ್ಟಿದ್ದನು. ಸೋಮವಾರ ತಾಯಿ ಕಸ್ತೂರಮ್ಮ ಮಗಳು ಖಯಾಲ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಟ್ಟು 11 ಜನ ಗಾಯಗೊಂಡಿದ್ದರು. 11 ಜನರಲ್ಲಿ ಮೂವರು ಮೃತಪಟ್ಟಿದ್ದಾರೆ. ಸರಸಮ್ಮ ಎಂಬುವರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಡುಗೋಡಿ ಪೊಲೀಸರಿಂದ ತನಿಖೆ ಮುಂದುವರೆದಿದೆ.


