BBMP
Loading ...

BBMP

ಬೆಂಗಳೂರು: ನಗರದ ಸ್ವಚ್ಛತಾ ಕಾರ್ಯಗಳ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ, ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆಗೆ ಬಳಸಲಾಗುವ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ದಾಖಲೆ) ಸಮಯವನ್ನು ಪರಿಷ್ಕರಿಸಲಾಗಿದೆ.

ಹೊಸ ನಿಯಮದ ಪ್ರಕಾರ, ಇಂದಿನಿಂದ ವಾಹನಗಳ ಸ್ಕ್ಯಾನಿಂಗ್ ಸಮಯವನ್ನು ಬೆಳಿಗ್ಗೆ 5:30 ರಿಂದ 6:30ರವರೆಗೆ ನಿಗದಿಪಡಿಸಲಾಗಿದೆ. ಈ ಹಿಂದೆ ಬೆಳಿಗ್ಗೆ 6ರಿಂದ 7:30ರವರೆಗೆ ಮಸ್ಟರಿಂಗ್ ನಡೆಯುತ್ತಿತ್ತು. ಒಂದು ಗಂಟೆ ಮುಂಚಿತಗೊಳಿಸುವ ಮೂಲಕ ತ್ಯಾಜ್ಯ ಸಂಗ್ರಹಣೆಯನ್ನು ಜನರ ದೈನಂದಿನ ಕಾರ್ಯವೈಖರಿಯ ಜೊತೆಗೆ ಹೊಂದುವಂತೆ ಕ್ರಮ ಕೈಗೊಳ್ಳಲಾಗಿದೆ.

ಈ ಬದಲಾವಣೆಯಿಂದ ನಿವಾಸಿಗಳು ಕೆಲಸಕ್ಕೆ ಹೊರಡುವ ಮೊದಲು ತ್ಯಾಜ್ಯವನ್ನು ನೀಡಲು ಅನುಕೂಲವಾಗಲಿದೆ. ಜೊತೆಗೆ ಸಾರ್ವಜನಿಕರಿಂದ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವ ಪ್ರಕರಣ ಹಾಗೂ ಕಪ್ಪು ಚುಕ್ಕಿ (Garbage Black Spots)ಗಳ ನಿರ್ಮಾಣ ತಡೆಯಲು ಸಹಕಾರಿಯಾಗಲಿದೆ.

ಸಾರ್ವಜನಿಕರ ಸಹಕಾರ ಅಗತ್ಯವಿರುವುದನ್ನು ಸೂಚಿಸಿದ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ಅವರು, ಈ ಕ್ರಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ವಿನಂತಿ ಮಾಡಿದ್ದಾರೆ.

Leave a Reply

Your email address will not be published. Required fields are marked *