BBMP
Loading ...

BNG Pub

ಬೆಂಗಳೂರು:- ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ ಎದುರಾಗಿದ್ದು, ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದಾಗಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ಪಬ್, ಕ್ಲಬ್, ಹೋಟೆಲ್, ಬಾರ್‌ಗಳಿಗೆ ಬಿಬಿಎಂಪಿ ಬಿಗ್‌ಶಾಕ್ ನೀಡಿದೆ.

ಪಾಲಿಕೆ ಕಳೆದ 15 ದಿನಗಳ ಹಿಂದೆ ಸುಮಾರು 300ಕ್ಕೂ ಹೆಚ್ಚು ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ನೋಟಿಸ್ ಜಾರಿ ಮಾಡಿತ್ತು. ಸ್ಮೋಕಿಂಗ್ ಝೋನ್ ನಿರ್ಮಾಣ ಮಾಡಿಲ್ಲ ಅಂತಾ ನೋಟಿಸ್ ನೀಡಿ ಎಚ್ಚರಿಸಿತ್ತು. ನೋಟಿಸ್ ಜಾರಿ ಮಾಡಿದರೂ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ಸರಿಪಡಿಸಿಕೊಂಡಿಲ್ಲ ಎಂಬ ಮಾಹಿತಿ ಬಿಬಿಎಂಪಿ ಪರಿಶೀಲನೆ ವೇಳೆ ಗೊತ್ತಾಗಿದೆ. ಹೀಗಾಗಿ ಅಂತಹ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ಬಿಸಿ ಮುಟ್ಟಿಸಲು ಪಾಲಿಕೆ ಮುಂದಾಗಿದೆ.

ಇನ್ನೂ ಬಿಬಿಎಂಪಿ ಮುಂದಿನ ವಾರ ನೋಟಿಸ್ ನೀಡಿದ್ದ ಸ್ಥಳಗಳನ್ನು ಪರಿಶೀಲನೆ ನಡೆಸಲಿದೆ. ಪರಿಶೀಲನೆ ನಡೆಸಿ ನೋಟಿಸ್ ಕೊಟ್ಟ ಮೇಲೂ ಸ್ಮೋಕಿಂಗ್ ಝೋನ್ ಅಳವಡಿಸಿಕೊಂಡಿಲ್ಲ ಎಂಬುದು ಕಂಡು ಬಂದರೆ ಪರವಾನಗಿ ರದ್ದು ಮಾಡಲಿದ್ದಾರೆ.

Leave a Reply

Your email address will not be published. Required fields are marked *