BBMP
Loading ...

Traffic Fine

ಬೆಂಗಳೂರು:- ಟ್ರಾಫಿಕ್ ಫೈನ್ ಕಟ್ಟಲು 50% ರಿಯಾಯಿತಿಗೆ ವಾಹನ ಸವಾರರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, 35.72 ಕೋಟಿ ದಂಡ ಪಾವತಿ ಆಗಿದೆ.

ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿತ್ತು. ಅದರ ಬೆನ್ನಲ್ಲೇ ಬಾಕಿಯಿದ್ದ 12,70,950 ಕೇಸ್‌ಗಳ ದಂಡ ಪಾವತಿಯಾಗಿದ್ದು. ಈವರೆಗೂ 35.72 ಕೋಟಿ ರೂ. ಸಂಗ್ರಹವಾಗಿದೆ. ಇನ್ನೂ ಸೆ.12ರವರೆಗೆ ದಂಡ ಪಾವತಿ ಮಾಡಲು ಕಾಲಾವಕಾಶವಿದ್ದು, ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ.

ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಆದೇಶ ಹೊರಡಿಸಿ, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸುವಂತೆ ರಿಯಾಯಿತಿ ಘೋಷಿಸಿದ್ದರು. ಇದಕ್ಕೂ ಮುನ್ನ ರಾಜ್ಯ ಸರ್ಕಾರ ಇದೇ ರೀತಿ ರಿಯಾಯಿತಿ ಘೋಷಿಸಿ ಭಾರೀ ಮೊತ್ತದ ದಂಡ ಸಂಗ್ರಹಿಸಿತ್ತು ಎನ್ನಲಾಗಿದೆ.

Leave a Reply

Your email address will not be published. Required fields are marked *