BBMP
Loading ...

Traffic Police

Greater Bengaluru News : ಟ್ರಾಫಿಕ್ ಫೈನ್ (Traffic Fine) ಪಾವತಿಗೆ 50% ಡಿಸ್ಕೌಂಟ್ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, 15 ದಿನಕ್ಕೆ ದಂಡದ ಪಾವತಿ ಮೊತ್ತ 45 ಕೋಟಿ ರೂ. ದಾಟಿದೆ. ವಾಹನ ಮಾಲೀಕರು 16,21,721 ಬಾಕಿ ಕೇಸ್‌ಗಳಿಗೆ ದಂಡ ಪಾವತಿಸಿದ್ದು, ಇಲ್ಲಿವರೆಗೆ 45.52 ಕೋಟಿ ರೂ. ದಂಡ ಪಾವತಿಯಾಗಿದೆ.

ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿದ್ದರು. ಇನ್ನೂ ಸೆ.12ರವರೆಗೆ ದಂಡ ಪಾವತಿ ಮಾಡಲು ಕಾಲಾವಕಾಶವಿದ್ದು, ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ.

ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಆದೇಶ ಹೊರಡಿಸಿ, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ 50% ಮೊತ್ತವನ್ನು ಪಾವತಿಸುವಂತೆ ರಿಯಾಯಿತಿ ಘೋಷಿಸಿದ್ದರು.

Leave a Reply

Your email address will not be published. Required fields are marked *