BBMP
Loading ...

Revanna

Greater Bengaluru News 9 : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಾಮಾನ್ಯ ಕೈದಿಯಂತೆ ತಮ್ಮ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಜೈಲು ಅಧಿಕಾರಿಗಳು ಅವರನ್ನು ಲೈಬ್ರರಿಯ ಕ್ಲರ್ಕ್ ಆಗಿ ನೇಮಿಸಿದ್ದು, ಪುಸ್ತಕಗಳನ್ನು ವಿತರಿಸುವುದು ಮತ್ತು ನೋಂದಣಿ ಮಾಡುವ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.

ಸದ್ಯಕ್ಕೆ ಪ್ರಜ್ವಲ್ ರೇವಣ್ಣ ಅವರು ಒಂದು ದಿನದ ಮಟ್ಟಿಗೆ ಕೆಲಸ ಮಾಡಿದ್ದು, ದಿನಗೂಲಿಯಾಗಿ 522 ರೂಪಾಯಿಗಳನ್ನು ಸಂಬಳವಾಗಿ ಪಡೆಯುತ್ತಿದ್ದಾರೆ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ. ನ್ಯಾಯಾಲಯದ ವಿಚಾರಣೆಗಾಗಿ ಆಗಾಗ ಬರಬೇಕಾಗಿರುವುದರಿಂದ ಮತ್ತು ವಕೀಲರೊಂದಿಗೆ ಇತರ ಪ್ರಕರಣಗಳ ಚರ್ಚೆಗಾಗಿ ಸಮಯ ಬೇಕಾಗಿರುವ ಕಾರಣ, ಅವರನ್ನು ಪೂರ್ಣ ಸಮಯದ ಕೆಲಸಕ್ಕೆ ನಿಯೋಜಿಸಿಲ್ಲ.

ಪ್ರಜ್ವಲ್ ರೇವಣ್ಣ ಅವರ ಜೈಲು ಜೀವನವು ಸಾಮಾನ್ಯ ಕೈದಿಗಳಂತೆಯೇ ಇದ್ದು, ಕಾರಾಗೃಹದ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ಜೀವಾವಧಿ ಶಿಕ್ಷೆಯಾಗಿದ್ದರೂ, ಜೈಲಿನಲ್ಲಿ ಕೆಲಸ ಮಾಡುವ ಮೂಲಕ ಸಮಯ ಕಳೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *